ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಮತ್ತು ಶಾಸಕ ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಧ್ಯಕ್ಷ ಪಟ್ಟ ಕಟ್ಟಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ರನ್ನಾಗಿ ನೇಮಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆದೇಶ ಹೊರಡಿಸಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರಿಗೆ ಮಣೆ ಹಾಕಿದೆ
ಕಳೆದ ಹಲವಾರು ತಿಂಗಳಿಂದ ಖಾಲಿ ಬಿದ್ದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಕಡೆಗೂ ತುಂಬಿ ಯಡಿಯೂರಪ್ಪ ಅವರಿಗೆ ದೀಪಾವಳಿಯ ಗಿಫ್ಟ್ ಅನ್ನು ಈ ಮೂಲಕ ನೀಡಲಾಗಿದೆ
ಈಗಾಗಲೇ ಬಿಜೆಪಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮೂಲೆಗೆ ತಳ್ಳಲಾಗಿದೆ ಅವರಿಗೆ ಆಧ್ಯತೆ ನೀಡುತ್ತಿಲ್ಲ ಎಂದು ಹೈಕಮಾಂಡ್ ವಿರುದ್ಧ ಲಿಂಗಾಯತ ಸಮುದಾಯ ಅಸಮಾಧಾನಗೊಂಡಿತ್ತು.
ಅಂತೂ ಇಂತೂ ಅಳೆದು ತೂಗಿ ಯಡಿಯೂರಪ್ಪ ಅವರನ್ನು ಮುಂದಿಟ್ಟುಕೊಳ್ಳಲು ಹೈಕಮಾಂಡ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಜೊತೆಗೆ ಯುವಕರಿಗೆ ಆದ್ಯತೆ ನೀಡಲಾಗಿದೆ ಎಂಬ ಸಂದೇಶವನ್ನು ಮತ್ತು ಲಿಂಗಾಯಿತರಿಗೂ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ ಎಂಬುದನ್ನು ಎತ್ತಿ ಹಿಡಿಯಲು ವಿಜಯೇಂದ್ರ ಅವರನ್ನು ಮುನ್ನಲೆಗೆ ತರಲಾಗಿದೆ ಎಂದೇ ರಾಜಕೀಯವಾಗಿ ವಿಶ್ಲೇಷಿಸಲಾಗುತ್ತಿದೆ.

