ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಬಿಜೆಪಿ ಸಂಘಟಿಸುತ್ತೇವೆ -ಬಿ.ವೈ.ವಿಜಯೇಂದ್ರ ವಿಶ್ವಾಸ

ಬೆಂಗಳೂರು: ನಮ್ಮ ಪಕ್ಷದ ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುತ್ತೇವೆ ಎಂದು ಬಿಜೆಪಿ ರಾಜ್ಯ ನೂತನ ಅಧ್ಯಕ್ಷ ಬಿ. ವೈ ವಿಜಯೇಂದ್ರ ತಿಳಿಸಿದರು.

ಶನಿವಾರ ಬೆಳಿಗ್ಗೆ ಬೆಂಗಳೂರಿನ ಗಾಂಧಿನಗರ ವಾರ್ಡ್ ಬೂತ್ ಮಟ್ಟದ ಅಧ್ಯಕ್ಷ ಶಶಿಧರ್ ಮನೆಗೆ ಬಿ ವೈ ವಿಜಯೇಂದ್ರ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯ ಬಿಜೆಪಿಯಲ್ಲಿ ಹಲವು ಸವಾಲುಗಳು, ಸಮಸ್ಯೆಗಳು ಇವೆ. ಸದ್ಯ ನಮಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅತಿಹೆಚ್ಚು ಸೀಟುಗಳನ್ನು ಗೆಲ್ಲುವುದು ಗುರಿಯಾಗಿದೆ ಎಂದು ತಿಳಿಸಿದರು.

ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುತ್ತೇವೆ, ರಾಷ್ಟ್ರೀಯ ನಾಯಕರು ಕೂಡ ಬೂತ್ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಇಂದು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ ಎಂದು ಹೇಳಿದರು.

ಬೂತ್ ಗೆದ್ದರೆ ರಾಷ್ಟ್ರ ಗೆಲ್ಲುತ್ತೇವೆ ಎಂಬುದು ನಡ್ಡಾ ಅವರ ಕಲ್ಪನೆಯಾಗಿದೆ. ಹೀಗಾಗಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುತ್ತೇವೆ ಎಂದು ತಿಳಿಸಿದರು.