ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಹಿಮಾಚಲ ಪ್ರದೇಶ ತಲುಪಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿಯನ್ನು ಸೈನಿಕರೊಂದಿಗೆ ಆಚರಿಸಲಿದ್ದಾರೆ.

ಮೋದಿ ಅವರು ದೀಪಾವಳಿ ಆಚರಿಸಲು ಭಾನುವಾರ ಚೀನಾ ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ ಲೆಪ್ಚಾಗೆ ತೆರಳಿದರು.

ಭಾನುವಾರ ಬೆಳಗ್ಗೆ ಹಿಮಾಚಲ ಪ್ರದೇಶ ತಲುಪಿದ ಪ್ರಧಾನಿ ಮೋದಿ, ನಮ್ಮ ವೀರ ಭದ್ರತಾ ಪಡೆಗಳೊಂದಿಗೆ ದೀಪಾವಳಿ ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾವನ್ನು ತಲುಪಿದ್ದೇನೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿಯವರು ದೇಶದ ಜನರಿಗೆ ಒಳ್ಳೆಯ ಆರೋಗ್ಯ ಲಭಿಸಲಿ ಎಂದು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.