ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬುಧವಾರ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕಾರ ಮಾಡಿದರು.

ರಾಜ್ಯಾಧ್ಯಕ್ಷರ ಕಚೇರಿಯಲ್ಲಿ  ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು ನಳಿನ್ ಕುಮಾರ್​ ಕಟೀಲ್ ಅವರು ವಿಜಯೇಂದ್ರಗೆ ಅಧಿಕಾರ ಹಸ್ತಾಂತರ ಮಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಮಾಜಿ ಸಚಿವರಾದ ಅಶೋಕ್​, ಗೋವಿಂದ ಕಾರಜೋಳ, ಮುನಿರತ್ನ, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಮತ್ತಿತರ ನಾಯಕರು ಪಾಲ್ಗೊಂಡಿದ್ದರು.

ಅಧಿಕಾರ ಸ್ವೀಕಾರ ಬಳಿಕ ತಂದೆ ಬಿ.ಎಸ್ ಯಡಿಯೂರಪ್ಪಅವರ ಕಾಲಿಗೆ ವಿಜಯೇಂದ್ರ ನಮಸ್ಕರಿಸಿ‌ ಆಶೀರ್ವಾದ ಪಡೆದರು.

ನಂತರ ಹಿರಿಯ ನಾಯಕರು ವಿಜಯೇಂದ್ರ ಅವರಿಗೆ ಹಸ್ತಲಾಘವ ನೀಡಿ ಶುಭ ಕೋರಿದರು.