ಬೆಂಗಳೂರು: ಅಂತೂ ಇಂತೂ ಕಡೆಗೂ ಬಿಜೆಪಿ ಹೈಕಮಾಂಡ್ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡೆ ಬಿಟ್ಟಿದೆ.
ಮಾಜಿ ಉಪ ಮುಖ್ಯಮಂತ್ರಿ ಒಕ್ಕಲಿಗ ಸಮುದಾಯದ ಮುಖಂಡ ಆರ್. ಅಶೋಕ್ ಅವರು ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಶೋಕ್ ಅವರ ಹೆಸರನ್ನು ಸೂಚಿಸಿದರು.
ಇದಕ್ಕೆ ಸುನಿಲ್ ಕುಮಾರ್ ಅನುಮೋದಿಸಿದರು,ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಶೋಕ್ ಹೆಸರನ್ನು ಘೋಷಿಸಿದರು.
ಕಡೆಗೆ ಸಭೆಯಲ್ಲಿ ಸರ್ವನಾಮತದಿಂದ ಆರ್.ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು.
ಬಿಜೆಪಿ ಹೈಕಮಾಂಡ್ ಆರ್ ಅಶೋಕ್ ಅವರ ಹೆಸರನ್ನು ಸೂಚಿಸಿತ್ತು ಆದರೆ ಇದಕ್ಕೆ ಬಿಜೆಪಿಯ ಕೆಲವು ಮುಖಂಡರಲ್ಲಿ ಅಸಮಾಧಾನವೂ ಇತ್ತು.
ಹಾಗಾಗಿ ಬಸನಗೌಡ ಪಾಟೀಲ್ ಯತ್ನಾಳ್,ಶಿವರಾಂ ಹೆಬ್ಬಾರ್, ರಮೇಶ್ ಜಾರಕಿಹೊಳಿ, ಎಸ್.ಟಿ.ಸೋಮಶೇಖರ್ ಇಂದಿನ ಶಾಸಕಾಂಗ ಸಭೆಗೆ ಗೈರಾಗಿದ್ದರು.
ಪ್ರತಿಪಕ್ಷದ ನಾಯಕನ ಆಯ್ಕೆ ಆಗುತ್ತಿದ್ದಂತೆ ಬಿಜೆಪಿ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿತ್ತು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಎಲ್ಲ ನಾಯಕರು ಆರ್.ಅಶೋಕ್ ಅವರನ್ನು ಅಭಿನಂದಿಸಿದರು.

