ಕುಮಾರಸ್ವಾಮಿ ಅವರ ಸರ್ಕಾರದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ –  ಸಿದ್ದರಾಮಯ್ಯ

ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್ ಮಾಡಿದರೂ, ಅವುಗಳಿಗೆ ಉತ್ತರಿಸುವ ಅವಶ್ಯಕತೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ‌ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಕುಮಾರಸ್ವಾಮಿಯವರು ಅವರ ಸರ್ಕಾರದ ಅವಧಿಯಲ್ಲಿ ಮಾಡುತ್ತಿದ್ದ ವರ್ಗಾವಣೆ ಮತ್ತು ಹಣದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ನಾನು ಈ ಮೊದಲೂ ಹೇಳಿದ್ದೆ ಈಗಲೂ ಹೇಳುತ್ತುದ್ದೇನೆ, ಹಣ ತೆಗೆದುಕೊಂಡು ವರ್ಗಾವಣೆ ಮಾಡಿಸಿದ್ದರೆ, ನನ್ನ ರಾಜಕೀಯ ಜೀವನದಿಂದ ನಿವೃತ್ತಿ ಹೊಂದುತ್ತೇನೆ ಎಂದು ತಿಳಿಸಿದರು.

ಭಾರತ ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ: ಭಾರತ ಆಸ್ಟ್ರೇಲಿಯಾ ನಡುವಿನ ವಿಶ್ವ ಕಪ್ ಕ್ರಿಕೆಟ್ ಪೈನಲ್ ಪಂದ್ಯದ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಇದೇ‌ ವೇಳೆ ಸಿದ್ದರಾಮಯ್ಯ  ಶುಭ ಕೋರಿದರು.

ಭಾರತ ಹತ್ತು ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಈ ಬಾರಿಯ  ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕೆ ಲಭಿಸಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.