ಬೆಂಗಳೂರು: ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್ ಪಡೆದಿರುವುದು ಕಾನೂನು ಬಾಹಿರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು,ರಾಜ್ಯ ಕಾಂಗ್ರೆಸ್ ಸರ್ಕಾರ ಕಾನೂನಿನ ವಿರುದ್ದವಾಗಿ ನಿರ್ಣಯ ಕೈಗೊಂಡಿದ್ದು ಡಿ.ಕೆ.ಶಿವಕುಮಾರ್ರನ್ನು ಉಳಿಸಲು ಮುಂದಾಗಿದೆ ಎಂದು ದೂರಿದರು.
ಸರ್ಕಾರದ ಈ ನಿರ್ಧಾರ ದುರದೃಷ್ಟಕರ, ಡಿ.ಕೆ ಶೀವಕುಮಾರ್ ಅವರೇ ಈ ನಿರ್ಧಾರವನ್ನ ವಿರೋಧಿಸಬೇಕಿತ್ತು. ಆದರೂ ತಾವು ಸತ್ಯಹರಿಶ್ಚಂದ್ರ ಅಂತ ಸಾಬೀತು ಮಾಡುವ ಅವಕಾಶ ಇದೆ, ತಪ್ಪು ಮಾಡಿಲ್ಲ ಎನ್ನವುದನ್ನ ತನಿಖೆ ಎದುರಿಸಿ ತೋರಿಸಿ ಎಂದು ಸವಾಲು ಹಾಕಿದರು.
ಸಚಿವ ಸಂಪುಟ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಯಾವ ರೀತಿ ಹೋರಾಟ ಮಾಡಬೇಕೆಂದು ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ.
ನಮ್ಮ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರ ರಾಜಕೀಯ ಪ್ರೇರಿತವಲ್ಲ. ಪ್ರಾಥಮಿಕ ತನಿಖೆ ಮಾಹಿತಿ ಆಧರಿಸಿ ಸಿಬಿಐ ತನಿಖೆಗೆ ಕೊಡಲಾಗಿತ್ತು ಎಂದು ಬಿ.ವೈ ವಿಜಯೇಂದ್ರ ಹೇಳಿದರು.

