ತುಮಕೂರು: ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣದ ಮೂಲವನ್ನು ಪತ್ತೆ ಹಚ್ಚುವವರೆಗೂ ಪ್ರಕರಣವನ್ನು ಹಾಗೇ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಶಾಲೆಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಜಿ.ಪರಮೇಶ್ವರ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ
ಈ ಬಗ್ಗೆ ಮಾಧ್ಯಮ ದವರೊಂದಿಗೆ ಮಾತನಾಡಿದ ಪರಮೇಶ್ವರ್,
ಬೆದರಿಕೆ ಬಂದಿರುವ 15 ಶಾಲೆಗಳಲ್ಲಿಯೂ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ, ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದರು.
ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶಿಲೀಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ.
ತುಮಕೂರಿನಿಂದ ಬೆಂಗಳೂರಿಗೆ ವಾಪಾಸ್ ಆದ ನಂತರ ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮಕ್ಕಳು ಆತಂಕಪಡುವುದು ಬೇಡ ಎಂದು ಪರಮೇಶ್ವರ್ ಹೇಳಿದ್ದಾರೆ.

