ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ:ಭಯಾನಕ ಸತ್ಯ ಬಿಚಿಟ್ಟ ಹೆಡ್ ನರ್ಸ್

ಬೆಂಗಳೂರು: ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ,ಒಂದು ಮಾಸದಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎಂದು ಮಾತಾ ಆಸ್ಪತ್ರೆಯ ರಾಕ್ಷಸಿ ಹೆಡ್ ನರ್ಸ್ ಮಂಜುಳಾ ಭಯಾನಕ ಸತ್ಯವನ್ನು ಪೊಲೀಸರಿಗೆ ತಿಳಿಸಿದ್ದಾಳೆ.

ಮೈಸೂರು ಭ್ರೂಣ ಹತ್ಯೆ ಪ್ರಕರಣದಲ್ಲಿ ಪೊಲೀಸರು ನರ್ಸ್ ಮಂಜುಳಾಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ ವೇಳೆ ತಾನು ಮಾಡುತ್ತಿದ್ದ ಈ ಬೀಬತ್ಸ ಕೆಟ್ಟ ಕೆಲಸವನ್ನು ತಿಳಿಸಿದ್ದಾಳೆ.

ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು. 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು. ಅದನ್ನು ಪೇಪರ್‌ನಲ್ಲಿ ಸುತ್ತಿ ನಿಸಾರ್‌ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ ಎಂಬ‌ ಭಯಾನಕ ಮಾಹಿತಿ ನೀಡಿದ್ದಾಳೆ.

12 ವಾರ ಕಳೆದ ಮಕ್ಕಳನ್ನು ಅಬಾರ್ಷನ್ ಮಾಡಿ ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು. 4 ದಿನಕ್ಕೆ ಮೆಡಿಕಲ್ ವೇಸ್ಟ್ ನಲ್ಲಿ ಮಗು ಕೊಳೆತು ಹೋಗುತ್ತಿತ್ತು ಎಂದು ‌ತಿಳಿಸಿದ್ದಾಳೆ.

ಕಳೆದ ಒಂದು ವರ್ಷದಿಂದ ನಾನು ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದೆ. ಈ ಮೊದಲು ರೀಸ್ಮಾ ಅಬಾರ್ಷನ್ ಕೆಲಸ ಮಾಡುತ್ತಿದ್ದಳು. ಅವಳಾದ ಬಳಿಕ ನಾನು ಈ ಅಬಾರ್ಷನ್ ಮಾಡುವುದಕ್ಕೆ ಸೇರಿಕೊಂಡಿದ್ದೆ.

ನಿಸಾರ್ ಮಗುವನ್ನು ನದಿಗೆ ಎಸೆದು ಬರುತ್ತಿದ್ದ, ನದಿಯನ್ನು ಬಿಟ್ಟು ಬೇರೆ ಜಾಗದಲ್ಲಿ ಬಿಸಾಕಿದರೆ ಅವಷೇಶಗಳು ಸಿಕ್ಕಿಬಿಡುತ್ತದೆ. ಅದಕ್ಕೆ ನಿಸಾರ್ ಮಗುವನ್ನು ನದಿಗೆ ಬಿಸಾಕುವ ಕೆಲಸ ಮಾಡುತ್ತಿದ್ದ.

6 ತಿಂಗಳ ಮಗು ಅಬಾರ್ಷನ್ ಮಾಡಲು ನಮ್ಮದೇ ಕಾರಣ ಇದೆ. 6 ತಿಂಗಳ ಮಗುವನ್ನು ಸಿಸೇರಿಯನ್ ಮೂಲಕ ಹೆರಿಗೆ ರೀತಿಯಲ್ಲಿ ಮಾಡುತ್ತಿದ್ದೆವು. ಸಿ ಸೆಕ್ಷನ್ ಮೂಲಕ ತೆಗೆದು ಟೇಬಲ್ ಮೇಲೆ ಇಡಲಾಗುತ್ತಿತ್ತು. 5 ರಿಂದ 10 ನಿಮಿಷಕ್ಕೆ ಆ ಮಗು ಸಾಯುತ್ತಿತ್ತು. ತಾಯಿಗೆ ಪ್ರಜ್ಞೆ ಇಲ್ಲದಂತೆ ಮಾಡಿ ಸಿ ಸೆಕ್ಷನ್ ಮಾಡಲಾಗುತ್ತಿತ್ತು ಎಂದು ಇನ್ನೂ ಮನುಷ್ಯರು
ಅರಗಿಸಿಕೊಳ್ಳ ಲಾರದಂತಹ ಮಾಹಿತಿಗಳನ್ನು ನರ್ಸ್ ‌ಮಂಜುಳ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾಳೆ