ಇಂಡಿಯಾ ಕೂಟಕ್ಕೆ ಪಂಚ ರಾಜ್ಯಗಳ ಚುನಾವಣೆಯಲ್ಲಿ ತಕ್ಕ ಪಾಠ:ವಿಜಯೇಂದ್ರ

ಬೆಂಗಳೂರು: ಬೊಬ್ಬೆ ಹೊಡೆಯುತಿದ್ದ ಇಂಡಿಯಾ ಕೂಟಕ್ಕೆ ಪಂಚ ರಾಜ್ಯಗಳ ಚುನಾವಣೆಯಲ್ಲಿ ಜನ ಪಾಠ ಕಲಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಕರ್ನಾಟಕದಲ್ಲಿ ಗ್ಯಾರೆಂಟಿ ಆಮಿಷ ಒಡ್ಡಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿದೆ,ಆದರೆ ರಾಜ್ಯದ ಜನ ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ,ಈಗ ಮತ್ತೊಮ್ಮೆ ಬಿಜೆಪಿ ಅಲೆ ಎದ್ದಿದೆ ಎಂಬುದು ಗೋಚರವಾಗುತ್ತಿದೆ ಎಂದು ಹೇಳಿದರು.

ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಚುನಾವಣೆ ಮೂಲಕ ಜನ ಉತ್ತರ ಕೊಟ್ಟಿದ್ದಾರೆ.

ತೆಲಂಗಾಣದಲ್ಲಿ ಬಿಜೆಪಿಗೆ ಬಹಳ ನಿರೀಕ್ಷೆ ಇರಲಿಲ್ಲ, ಕರ್ನಾಟಕದ ಬಿಜೆಪಿ ಫಲಿತಾಂಶ ಆ ರಾಜ್ಯದಲ್ಲಿ ಎಫೆಕ್ಟ್ ಆಗಿತ್ತು. ತೆಲಂಗಾಣದಲ್ಲಿ ಲೋಕಸಭೆ ಚುನಾವಣೆಯಲ್ಲಿ ಈ ಫಲಿತಾಂಶ ವರ್ಕ್ ಆಗಲಾರದು ಎಂದು ವಿಜಯೇಂದ್ರ ಹೇಳಿದರು.