ಮಿಜೋರಾಂನಲ್ಲಿ ಝೋರಾಮ್ ಪೀಪಲ್ಸ್ ಮೂವ್ಮೆಂಟ್‌ ಗೆ ಭರ್ಜರಿ ಗೆಲುವು

ಐಜ್ವಾಲ್: ಮಿಜೋರಾಂನಲ್ಲಿ 40 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಪ್ರಾದೇಶಿಕ ಪಕ್ಷವಾದ ಝೋರಾಮ್ ಪೀಪಲ್ಸ್ ಮೂವ್ಮೆಂಟ್‌ (ZPM) 27 ಕ್ಷೇತ್ರಗಳಲ್ಲಿ ಗೆಲುವು ಸಾದಿಸಿದ್ದು ಅಧಿಕಾರ ಹಿಡಿಯಲಿದೆ.

ಮೀಜೋರಾಂನಲ್ಲಿ ಅಧಿಕಾರ ಹಿಡಿಯುವ ಉತ್ಸಾಹದಲ್ಲಿದ್ದ ಮಿಜೋ ನ್ಯಾಷನಲ್ ಫ್ರಂಟ್ (MNF) ಪಕ್ಷವು 10 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

2 ಕ್ಷೇತ್ರಗಳಲ್ಲಿ ಬಿಜೆಪಿ,1 ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ ಜಯ ಸಾದಿಸಿವೆ.

ಎಂಎನ್‌ಎಫ್‌ ಹಾಗೂ ಝಡ್‌ಪಿಎಂ ಮತ್ತು ಕಾಂಗ್ರೆಸ್‌ ಪಕ್ಷಗಳು ತಲಾ 40 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 13 ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನ ಸ್ಪರ್ಧೆ ಗಿಳಿಸಿತ್ತು.

ಮಿಜೋರಾಂನಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷ 4 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಿತ್ತು,17 ಮಂದಿ ಪಕ್ಷೇತರರು ಸ್ಪರ್ಧಿಸಿದ್ದರು.

ಹೊಸದಾಗಿ ಸ್ಥಾಪನೆಗೊಂಡಿದ್ದ ಝೋರಾಮ್ ಪೀಪಲ್ಸ್ ಮೂವ್ಮೆಂಟ್‌ 2018ರ ಚುನಾವಣೆಯಲ್ಲಿ ಕೇವಲ 8 ಸ್ಥಾನ ಗೆದ್ದಿತ್ತು.

MNF 26 ಸ್ಥಾನಗಳಲ್ಲಿ ಗೆದ್ದು ಅಧಿಕಾರ ಹಿಡಿದಿತ್ತು. ಕಾಂಗ್ರೆಸ್‌ ಕೇವಲ 5 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

ಆದರೆ ಝೋರಾಮ್ ಪೀಪಲ್ಸ್ ಮೂವ್ಮೆಂಟ್‌ 2ನೇ ಅವಧಿಯ ಚುನಾವಣೆಯಲ್ಲೇ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವುದು ವಿಶೇಷ.