4 ವರ್ಷ ಅಧಿಕಾರದಲ್ಲಿದ್ದರೂ ಬಿಜೆಪಿಯವರಿಗೆ ಗುಂಡಿ ಮುಚ್ಚಲಾಗಲಿಲ್ಲ – ಸಿದ್ದರಾಮಯ್ಯ ವ್ಯಂಗ್ಯ

ಬೆಳಗಾವಿ: ನಾವು ಅಧಿಕಾರಕ್ಕೆ ಬಂದು 6 ತಿಂಗಳಾಗಿದೆ ಅಷ್ಟೇ, ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದೆಯೇ, ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಗುಂಡಿ ಮುಚ್ಚಲಾಗಲಿಲ್ಲ  ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಸಿಎಂ,

ಉಚ್ಚ ನ್ಯಾಯಾಲಯ ಬಿಜೆಪಿಯವರಿಗೆ ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ  ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದೆ, ಸಚಿವರು ತೆಲಂಗಾಣದಲ್ಲಿದ್ದಾರೆ ಎಂಬ ಪ್ರತಿಪಕ್ಷದವರ ಹೇಳಿಕೆಗೆ ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ ರಾಜಕೀಯವನ್ನೂ  ಮಾಡಬೇಕಲ್ಲಾ ಎಂದು ಮಾರ್ಮಿಕವಾಗಿ ನುಡಿದರು.

ಜಮೀರ್ ಅಹ್ಮದ್ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೇ, ಬಹುತೇಕರು ವಾಪಸ್ಸು ಬಂದಿದ್ದಾರೆ ಎಂದು ಹೇಳಿದರು.

ಅಭಿವೃದ್ಧಿ ಭಾಷಣವಿಲ್ಲ ಸಿದ್ದರಾಮಯ್ಯ ಕೇವಲ ಓಲೈಕೆ ಭಾಷಣ ಮಾಡುತ್ತಾರೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅದೆಲ್ಲಾ ನಿಮ್ಮಿಂದಲೇ ಆಗಿದೆ. ಎಲ್ಲಾ ಸಮುದಾಯಗಳು ಒಳಗೊಂಡಂತೆ ಮುಸ್ಲಿಮರನ್ನು ರಕ್ಷಣೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.