ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ:ತೀವ್ರ ಬೇಸರ ಪಟ್ಟ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಘಟನೆಯಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ,ಈ ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮ ಸರ್ಕಾರದ್ದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.