ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯಭೂಮಿಯಲ್ಲಿ ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸಿ ಬೆಂಗಳೂರಿನಫೀಡಂ ಪಾರ್ಕ್ ಅವರಣದಲ್ಲಿ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು.
ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ, ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ಎನ್.ಮೂರ್ತಿ, ಬಿಜೆಪಿ ಮುಖಂಡರಾದ ಭಾಸ್ಕರ್ ರಾವ್, ಮತ್ತು ವಿಷ್ಣುವರ್ಧನ್ ಅಭಿಮಾನಿ ವೀರಕಪುತ್ರ ಶ್ರೀನಿವಾಸ್, ರವಿಕೃಷ್ಣರೆಡ್ಡಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು ಮತ್ತು ರಾಜ್ಯದ್ಯಂತ ವಿಷ್ಣು ಅಭಿಮಾನಿಗಳು, ಹಲವಾರು ಕನ್ನಡ ಪರ ಸಂಘಟನೆಗಳು ಪಾಲ್ಗೊಂಡಿದ್ದರು.
ಕಾಡಿನಲ್ಲಿ ಅ ಸಿಂಹ ನಾಡಿನಲ್ಲಿ ಸಾಹಸಿಸಿಂಹ ಇರಬೇಕು, ಅಭಿಮಾನ್ ಸ್ಟೂಡಿಯೊದಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.
ಕಳೆದ ಐದು ಮುಖ್ಯಮಂತ್ರಿಗಳ ಬಳಿ ಮನವಿ ಸಲ್ಲಿಸಲಾಗಿದೆ,ಆದರೆ ಇದುವರೆಗೆ ವಿಷ್ಣು ಸ್ಮಾರಕ ನಿರ್ಮಾಣ ವಾಗಲೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶ,ವಿದೇಶ ಮತ್ತು ನಾಡಿನಲ್ಲಿ ಕೊಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಡಾ.ವಿಷ್ಣುವರ್ಧನ್ ಅಭಿಮಾನಿಗಳಿಗೆ ನಿರಾಶೆ ಮಾಡಬೇಡಿ, ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು.

