ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ -ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು: ದೇಶದಲ್ಲಿ ಕೋವಿಡ್ ಹೆಚ್ಚಳವಾಗುತ್ತಿದ್ದು ರಾಜ್ಯದಲ್ಲಿ ಆತಂಕ ಶುರುವಾಗಿದೆ,ಹಾಗಾಗಿ ಕೋವಿಡ್ ತಡೆಗೆ ಸಾರಿಗೆ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ, ಬಸ್ಸುಗಳಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು‌ ಸಾರಿಗೆ ಸಚಿವ ರಾಮಲಿಂಗರೆಡ್ಡಿ‌ ತಿಳಿಸಿದ್ದಾರೆ.

ಸರ್ಕಾರದ ಮಾರ್ಗಸೂಚಿಯಂತೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ ಎಂದು ಮನವಿ ಮಾಡಿದರು.

ನಾವು ಸರ್ಕಾದ ಆದೇಶ ಪಾಲನೆ ಮಾಡುತ್ತೇವೆ ಸರ್ಕಾರದ ಮಾರ್ಗಸೂಚಿಯಂತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.