ಮೈಸೂರು: ಸಂಸತ್ ನಲ್ಲಿ ಪ್ರತಿಪಕ್ಷಗಳ ಸದಸ್ಯರ ಅಮಾನತು ಮಾಡಿರುವುದು ಸರಿಯಲ್ಲ,ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿರುವ ಸಿಎಂ,
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಇವರಿಗೆ ಪ್ರಜಾಪ್ರಭುತ್ವದ ಯಾವ ಆಶಯಗಳ ಮೇಲೂ ನಂಬಿಕೆ ಇಲ್ಲ,ಅಮಾನತು ಸರ್ವಾಧಿಕಾರದ ಪರಮಾವಧಿತನ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಪಕ್ಷಗಳ ಮಾತನ್ನು ಕೇಳಿಸಿಕೊಳ್ಳುವುದಿಲ್ಲ ಅಂದರೆ ಅರ್ಥವೇನು ಎಂದು ಪ್ರಶ್ನಿಸಿದ ಸಿದ್ದು,ಜನ ಇವರ ನಡವಳಿಕೆ ಗಮನಿಸುತ್ತಿದ್ದಾರೆ,ಅವರೇ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ದೇಶದಲ್ಲಿ ಪ್ರಜಾಪ್ರಭುತ್ವವೇ ಇಲ್ಲವ ಎಂಬ ವಾತಾವರಣವನ್ನ ಬಿಜೆಪಿ ಸೃಷ್ಟಿಸುತ್ತಿದೆ,
ಮುಂಬರುವ ಚುನಾವಣೆಯಲ್ಲೂ ಜನ ಇದನ್ನಲ್ಲಾ ಪರಿಶೀಲನೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.
ಸಚಿವ ಜಮೀರ್ ಜೊತೆ ಐಷಾರಾಮಿ ಜೆಟ್‌ನಲ್ಲಿ ಪ್ರಯಾಣ ಮಾಡಿದ ವಿಚಾರ ಕುರಿತ ಪ್ರಶ್ನೆಗೆ ಥಟ್ಟನೆ ಗರಂ ಆದ ಸಿದ್ದರಾಮಯ್ಯ ಮೋದಿ ಯಾವ ಫ್ಲೈಟ್‌ನಲ್ಲಿ ಓಡಾಡುತ್ತಾರೆ,ಅವರದು ಐಷಾರಾಮಿ ಫ್ಲೈಟ್ ಅಲ್ವಾ,ಎಂದು ಮಾಧ್ಯಮದವರನ್ನೇ ಮರು ಪ್ರಶ್ನಿಸಿದರು.
ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂತದ್ದು ಎಂಬುದನ್ನು
ಮೊದಲು ಬಿಜೆಪಿಯವರಿಗೆ ಕೇಳಿ ಎಂದು ಸಿದ್ದರಾಮಯ್ಯ ಹೇಳಿದರು.
ಕೋವಿಡ್‌ನಿಂದ ಪ್ರವಾಸಿ ತಾಣಗಳನ್ನ ಬಂದ್ ಮಾಡಲಾಗುತ್ತದಾ ಪ್ರಶ್ನೆಗೆ,
ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ ಎಂದು ಉತ್ತರಿಸಿದರು.
ಆದರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ಕೊಡಲಾಗಿದೆ.
ಮೈಸೂರಿನಲ್ಲಿ ಆರು ಜನರಿಗೆ ಕೋವಿಡ್ ಪಾಸಿಟಿವ್ ಆಗಿದೆ,
ಅವರಿಗೆ ಟ್ರಾವಲ್ ಹಿಸ್ಟರಿ ಇಲ್ಲ,ಆದರೆ ಬೇರೆ ಬೇರೆ ರೋಗದ ಹಿನ್ನೆಲೆಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.
ಎಲ್ಲರೂ ಕೋವಿಡ್ ನಿಯಮಗಳನ್ನ ಪಾಲನೆ ಮಾಡಿ ಎಚ್ಚರಿಕೆಯಿಂದ ಇರಬೇಕು ಎಂದು ಸಿದ್ದರಾಮಯ್ಯ ಜನತೆಗೆ ಸಲಹೆ ನೀಡಿದರು.

