ಬೇಜವಾಬ್ದಾರಿ ಹೇಳಿಕೆ ನೀಡಿ‌ ರೈತರಿಗೆ ಅವಮಾನ ಮಾಡಿದ ಸಚಿವರಿಗೆ ಬುದ್ದಿ ‌‌ಹೇಳಿ – ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ ರೈತರನ್ನು ಅವಮಾನಿಸುತ್ತಿದ್ದಾರೆ,ಅಂತಹ ಸಚಿವರಿಗೆ ಸಿಎಂ ಬುದ್ಧಿವಾದ ಹೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಲಹೆ ನೀಡಿದ್ದಾರೆ.

ಒಂದು ವೇಳೆ ತಿದ್ದಿಕೊಳ್ಳದ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ಅವರು ಆಗ್ರಹಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ರೈತರ ಕುರಿತು ಶಿವಾನಂದ್ ಪಾಟೀಲ್ ಅವರ ಹೇಳಿಕೆ ಖಂಡನಾರ್ಹ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನ್ನ ಕೊಡುವ ರೈತರ ಬಗ್ಗೆ ಸಚಿವರ ಹಾಗೂ ಸರ್ಕಾರದ ಧೋರಣೆ ಸರಿಯಲ್ಲ, ಬರಗಾಲ ಸಂಬಂಧ ರೈತರಿಗೆ ಸಮರ್ಪಕ ಪರಿಹಾರ ನೀಡದೆ ರೈತರಿಗೆ ಪದೇ ಪದೇ ಅವಮಾನ ಮಾಡುವ ಸರ್ಕಾರ ಇದು ಎಂದು ಕಿಡಿಕಾರಿದರು.

ಶಿವಾನಂದ್ ಪಾಟೀಲ್ ಹಾಗೂ ದೆಹಲಿ ಪ್ರವಾಸದ ವೇಳೆ ಜಮೀರ್ ಅಹ್ಮದ್ ಸೇರಿ ಸಚಿವರ ನಡವಳಿಕೆಗಳಿಕೆಗಳು ನಾವೆಲ್ಲ ತಲೆತಗ್ಗಿಸುವಂತಿದೆ ಇಂತಹ ‌ಸಚಿವರಿಗೆ ಸಿಎಂ ‌ಬುದ್ದಿ ಹೇಳಬೇಕು ಎಂದು ಒತ್ತಾಯಿಸಿದರು.