ಕೋಟೆ ನಾಡಿನಲ್ಲಿ ಘೋರ‌ ದುರಂತ:ಪಾಳುಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ

ಚಿತ್ರದುರ್ಗ: ಚಿತ್ರದುರ್ಗದ ಪಾಳು ಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿದ್ದು,ಕೋಟೆ ನಗರದ ಜನ ಬೆಚ್ಚಿಬಿದ್ದಿದ್ದಾರೆ.

ಕಳೆದ ಐದಾರು ವರ್ಷಗಳಿಂದ ಬಾಗಿಲು ಮುಚ್ಚಿದ್ದ ಪಾಳು ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿವೆ.

ಈ ಸಂಬಂಧ ಪವನ್ ಕುಮಾರ್ ಎಂಬವರು ಬಡಾವಣೆ ಠಾಣೆಗೆ ದೂರು ನೀಡಿದ್ದಾರೆ.

ಆ ಮನೆಯಲ್ಲಿ ಜಗನ್ನಾಥ ರೆಡ್ಡಿ ಮತ್ತು ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ, ನರೇಂದ್ರ ರೆಡ್ಡಿ ವಾಸವಾಗಿದ್ದರು.

ಸುಮಾರು ವರ್ಷಗಳಿಂದ ಜಗನ್ನಾಥ ರೆಡ್ಡಿ ಕುಟುಂಬ ನಮ್ಮ ಸಂಪರ್ಕದಲ್ಲಿರಲಿಲ್ಲ. ಅವರ ಮನೆಗೆ ಯಾರೂ ಹೋಗುತ್ತಿರಲಿಲ್ಲ,ಬೇರೆ ಯವರೂ ಹೋಗುತ್ತಿರಲಿಲ್ಲ ಎಂದು ಪವನ್ ಕುಮಾರ್ ತಿಳಿಸಿದ್ದಾರೆ.

ಕೆಲ ವರ್ಷಗಳಿಂದ ಜಗನ್ನಾಥ ರೆಡ್ಡಿ ಮತ್ತು ಕುಟುಂಬದವರು ನೋಡಿಯೇ ಇಲ್ಲ. ಜಗನ್ನಾಥ ರೆಡ್ಡಿ ಮನೆಯಲ್ಲಿ ಪತ್ತೆ ಆಗಿರುವುದು ಅವರ ಅಸ್ಥಿಪಂಜರ ಆಗಿರಬಹುದೆಂಬ ಶಂಕೆ ಇದೆ ಎಂದು ಅವರು ಹೇಳಿದ್ದಾರೆ.

3 ವರ್ಷದ ಹಿಂದೆಯೇ ಮನೆಯಲ್ಲಿ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಎಸ್‌ಪಿ ಧರ್ಮೇಂದರ್ ಕುಮಾರ್, ಡಿವೈಎಸ್ಪಿ ಅನಿಲ್‌ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆರಳಚ್ಚು ತಜ್ಞರು, ವೈದ್ಯರೊಂದಿಗೆ ಪೊಲೀಸರು ಸಮಾಲೋಚನೆ ನಡೆಸಿದ್ದಾರೆ. ಅಸ್ಥಿಪಂಜರಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆ ಮನೆಯಲ್ಲಿ ಕಳೆದ 10 ವರ್ಷಗಳ ಹಿಂದೆ ನಾಲ್ವರು ವಾಸವಾಗಿದ್ದರು. ಮನೆಯಿಂದ ಯಾರು ಹೊರಗೆ ಬರುತ್ತಿರಲಿಲ್ಲ ಎಂದು ‌ಸ್ಥಳೀಯರು ಹೇಳಿದ್ದಾರೆ.

ಪೊಲೀಸರ ಪರಿಶೀಲನೆ ವೇಳೆ ಆ ಮನೆಯಲ್ಲಿ 2019ರ ಕ್ಯಾಲೆಂಡರ್ ಪತ್ತೆಯಾಗಿದ್ದು ಹಲವು ಸಂಶಯಗಳನ್ನು ಹುಟ್ಟು ಹಾಕಿದೆ.

ಆ ಮನೆಯ ಸದಸ್ಯರಲ್ಲಿ ಬಾಬುರೆಡ್ಡಿ‌ ಎಂಬವರು ಮಾತ್ರ ಜನಸಂಪರ್ಕದಲ್ಲಿದ್ದು, ಉಳಿದವರು ಯಾರೂ ಹೊರ ಬರುತ್ತಿರಲಿಲ್ಲ.

ಹೀಗಾಗಿ ಸಾಕಷ್ಟು ಅನುಮಾನ ಮನೆಮಾಡಿದೆ,ಜತೆಗೆ ಜನರಲ್ಲಿ ಆತಂಕ ಸೃಷ್ಟಿಸಿದೆ.

ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಸತ್ಯ‌ ಬಯಲಿ ಗೆಳೆಯಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.