ಮಂಡ್ಯ: ಮಂಡ್ಯದ ಅರ್ಕೇಶ್ವರ ದೇವಾಲಯದಲ್ಲಿ ಮೂವರ ಹತ್ಯೆ ಸಂಬಂಧ ಘಟನೆಗೆ ಕಾರಣರಾದವರನ್ನು ಬಂಧಿಸುವಂತೆ ಜಿಲ್ಲಾ ಪೆÇಲಿಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಗೌಡ ಅವರು ತಿಳಿಸಿದರು.
ಅರ್ಕೇಶ್ವರ ದೇವಾಲಯದಲ್ಲಿ ಮೂವರ ಹತ್ಯೆ, ದೇವಸ್ಥಾನದ ಹುಂಡಿ ದೋಚಿದ ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಚಿವರು ಶುಕ್ರವಾರ ಭೇಟಿ ನೀಡಿ ನಂತರ ಮಾತನಾಡಿದರು.
ಘಟನೆ ಸಂಬಂಧ ಜಿಲ್ಲಾ ಪೆÇಲಿಸ್ ವರಿಷ್ಠಾಧಿಕಾರಿ ಜೊತೆ ಮಾತನಾಡಿದ್ದು, ಘಟನೆಗೆ ಕಾರಣರಾದವರನ್ನು ಬಂಧಿಸುವಂತೆ ಸೂಚಿಸಿದ್ದೇನೆಂದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು.
ಹಾಗೆಯೇ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರ್ ಅವರ ಬಳಿಯೂ ಈ ಬಗ್ಗೆ ಚರ್ಚಿಸಲಾಗಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವುದಾಗಿಯೂ ಸರ್ಕಾರ ಘೋಷಿಸಿದೆ ಎಂದು ತಿಳಿಸಿದರು.

