ರಾಜ್ಯದ 30 ಕಡೆ ಲೋಕಾಯುಕ್ತ ದಾಳಿ-ಅಪಾರ ಆಸ್ತಿ,ಸಂಪತ್ತು ಪತ್ತೆ

ಬೆಂಗಳೂರು: ರಾಜ್ಯದ ರಾಧಾನಿ ಬೆಂಗಳೂರು , ಮಂಡ್ಯ, ರಾಮನಗರ, ಬಳ್ಳಾರಿ ಸೇರಿದಂತೆ ರಾಜ್ಯದ ಸುಮಾರು 30 ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

ಬೆಂಗಳೂರಿನಲ್ಲೇ 10 ಕಡೆ, ಬಳ್ಳಾರಿಯಲ್ಲಿ 7 ಕಡೆ ಸೇರಿದಂತೆ ರಾಜ್ಯಾದ್ಯಂತ ಏಕಕಾಲಕ್ಕೆ 30 ಕಡೆಗಳಲ್ಲಿ ದಾಳಿ ನಡೆಸಿ,ಹಣ,ಆಭರಣ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.

ಬೆಸ್ಕಾಂ ಕಚೇರಿಯಲ್ಲಿ ಚೀಫ್ ಜನರಲ್ ಮ್ಯಾನೇಜರ್ ಆಗಿದ್ದ ಎಂ.ಎಲ್‌ ನಾಗರಾಜ್ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.

ಕೆಲ ದಿನಗಳ ಹಿಂದೆ ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದಿದ್ದ ನಾಗರಾಜ್‌ ಕಳೆದ ಒಂದೂವರೆ ತಿಂಗಳಿನಿಂದ ಅಮಾನತಿನಲ್ಲಿದ್ದರು.

ಇದೀಗ ಆತನ ಮನೆಯ ಮೇಲೂ ದಾಳಿ ನಡೆಸಿ, ಹಲವು ಆಸ್ತಿಗಳನ್ನ ಬಯಲಿಗೆಳೆದಿದ್ದಾರೆ.

ಇದೀಗ ನಾಗರಾಜ್‌ಗೆ ಸೇರಿದ ಬಳ್ಳಾರಿಯ 7 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ನಾಗರಾಜ್ ಹೆಸರಲ್ಲಿ 9 ಸೈಟ್‌ಗಳು, 3 ಮನೆಗಳು, 3 ಪೆಟ್ರೋಲ್ ಬಂಕ್, ಕೃಷಿ ಜಮೀನು, ಶಿಕ್ಷಣ ಸಂಸ್ಥೆಗಳು ಪತ್ತೆಯಾಗಿದೆ.

ದಾಳಿ ವೇಳೆ ಹಲವಾರು ದಾಖಲೆಗಳನ್ನ ಪತ್ತೆಹಚ್ಚಿರುವ ಲೋಕಾಯುಕ್ತ ಅಧಿಕಾರಿಗಳು ಶೋಧಕಾರ್ಯ ಮುಂದುವರಿಸಿದ್ದಾರೆ