ಕಾಂಗ್ರೆಸಿಗರಿಗೆ ರಾಮನ ಮೇಲಿನ ಭಕ್ತಿಗಿಂತ ಹೈಕಮಾಂಡ್ ಮೇಲಿನ ಭಯವೇ ಹೆಚ್ಚು:ಅಶೋಕ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರಿಗೆ ರಾಮನ ಮೇಲಿನ ಭಕ್ತಿಗಿಂತ ಹೈಕಮಾಂಡ್ ಮೇಲಿನ ಭಯವೇ ಹೆಚ್ಚಾಗಿವೆ ಎಂದು ‌ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಒಂದು ಕಡೆ ರಾಮಮಂದಿರದ ಬಗ್ಗೆ ಒಳ್ಳೆಯ ಮಾತಾಡದಿದ್ದರೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗುವ ಭಯ ಕಾಡುತ್ತಿದೆ.

ನ್ನೊಂದು ಕಡೆ ರಾಮಮಂದಿರದ ಬಗ್ಗೆ ಒಳ್ಳೆಯ ಮಾತಾಡಿದರೆ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಖುರ್ಚಿಗೇ ಕುತ್ತು ಬರುತ್ತದೆ ಎಂಬ ಭಯ ಕಾಂಗ್ರೆಸ್ ನಾಯಕರನ್ನು ‌ಕಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಒಟ್ಟಿನಲ್ಲಿ ನಾಯಕರ ಪಾಡು ಎಡಬಿಡಂಗಿ ಅತ್ತ ದರಿ ಇತ್ತ ಪುಲಿ ಎಂಬಂತಾಗಿದೆ ಎಂದು ಅಶೋಕ್ ಟೀಕಿಸಿದ್ದಾರೆ.