ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿದರು

ಈ ವೇಳೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್,ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ,ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.

ನಂತರ ಮುಖ್ಯಮಂತ್ರಿಗಳು ಪೊಲೀಸ್ ಐಟಿ-V2,ಪೊಲೀಸ್ ಮಿತ್ರ ಚಾಟ್ ಬಾಟ್
ಸಿಜಿ ನೋಂದಣಿ ಪೋರ್ಟಲ್,
ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ ಹಾಗೂ
ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶಗಳನ್ನು ಬಿಡುಗಡೆ ಮಾಡಿದರು.

ನಂತರ ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಮತ್ತಿತರರು ಹಾಜರಿದ್ದರು.