ಹಾಸನ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಯಾಗಿರುತ್ತಾರೆ ಎಂದು ಸಿಎಂ ಪುತ್ರ ಡಾ.ಯತೀಂದ್ರ ಭವಿಷ್ಯ ನುಡಿದಿದ್ದಾರೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ, ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೇ, 5 ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳಿದರು.
ಚುನಾವಣೆಗೂ ಮೊದಲು 5 ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಸಿದ್ದರಾಮಯ್ಯ ಅವರು 5 ಗ್ಯಾರಂಟಿಗಳನ್ನ ಜಾರಿಗೊಳಿಸಿದ್ದಾರೆ, ನುಡಿದಂತೆ ನಡೆಯುವುದಾಗಿ ಹೇಳಿದ್ದನ್ನು ಮತ್ತೆ ಸಾಬೀತು ಮಾಡಿದ್ದಾರೆ ಎಂದು ತಿಳಿಸಿದರು.
ಬಡವರು, ಶೋಷತರಿಗಾಗು ಕೆಲಸ ಮಾಡುವ ಹಂಬಲ ಕಾಂಗ್ರೆಸ್ ಪಕ್ಷಕ್ಕೆ ಇದೆ. ಹಾಗಾಗಿ ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲ ನೀಡಬೇಕು ಎಂದು ಡಾ.ಯತೀಂದ್ರ ಮನವಿ ಮಾಡಿದರು.
ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಿದೆ,ಹೆಚ್ಚು ಸ್ಥಾನಗಳನ್ನು ಗೆದ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತದೆ ಎಂದು ತಂದೆಯ ಪರ ಬ್ಯಾಟ್ ಮಾಡಿದರು.
ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಹಿಂದೆ ಸಾಮಾಜಿಕ ಕಾರ್ಯಕ್ರಮಕ್ಕಾಗಿ ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣ ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ನೀಡಬೇಕು ಎಂದು ಕೋರಿದರು.
2024ರ ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚು ಸ್ಥಾನ ಗೆದ್ದರೆ ನಮಗೆ ಬಲ ಬರುತ್ತೆ. ಆಗ ಸಿದ್ದರಾಮಯ್ಯನವರ ಬಲ ಹೆಚ್ಚಿಲಿದೆ.
ಮುಂದಿನ 5 ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ, ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆತಡೆ ಇಲ್ಲದೆ ಮುಂದುವರೆಯಲು ಸಾಧ್ಯವಾಗುತ್ತದೆ ಹಾಗಾಗಿ ನಿಮ್ಮ ಆಶೀರ್ವಾದ ಅವರ ಮೇಲೆ ಇರಲಿ ಎಂದು ಯತೀಂದ್ರ ಮನವಿ ಮಾಡಿದರು.

