ಬೆಂಗಳೂರು: ಸಿಸಿಬಿ ಅಧಿಕಾರಿಗಳು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರನ್ನು ವಿಚಾರಣೆ ಮಾಡಿದ್ದಕ್ಕೆ ಸಚಿವ ಪ್ರಿಯಾಂಕ ಖರ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲೂ ಗೋಧ್ರಾ ಹತ್ಯಾಕಂಡ ಮಾದರಿಯಲ್ಲಿ ಘಟನೆ ನಡೆಯಬಹುದು ರಾಮಮಂದಿರ ಉದ್ಘಾಟನೆಗೆ ಹೋಗುವವರಿಗೆ ರಕ್ಷಣೆ ನೀಡಿ ಎಂದು ಬಿ.ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದರು.
ಹಾಗಾಗಿ ಅವರನ್ನ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು,ಆದರೆ ಇದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ದ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ.
ಈಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಏಕೆ ಪದೇ ಪದೇ ಇದರ ಬಗ್ಗೆ ತನಿಖೆ ಆಗುತ್ತಿದೆಯಾ ಇಲ್ವಾ ಅಂತಾ ಕೇಳುತ್ತಿದ್ದಾರೆ ಅವರು ಯಾಕೆ ಇಷ್ಟೋಮನದು ಆಸಕ್ತಿ ವಹಿಸಿದ್ದಾರೆ ಎಂಬುದನ್ನು ಗಮನಿಸಬೇಕು ಎಂದು ಹೇಳಿದರು.
ಇದರ ಹಿಂದೆ ಕೇಂದ್ರದ ನಿರ್ದೇಶನವಿದೆಯಾಅಥವಾ ಸರ್ಕಾರಕ್ಕೆ ಮುಜುಗರ ತರುವ ಉದ್ದೇಶವಿದೆಯೇ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ತಿಳಿಸಿದರು.
ರಾಜ್ಯಪಾಲರ ಮೂಲಕ ಬಿಜೆಪಿ ಆಳ್ವಿಕೆ ಮಾಡುತ್ತಿದೆ. ಲಾ ಅಂಡ್ ಆರ್ಡರ್ ಗೂ ರಾಜ್ಯಪಾಲರಿಗೂ ಏನು ಸಂಬಂಧ ಬಿಜೆಪಿ ಸರ್ಕಾರ ಇದ್ದಾಗ ಎಂದೂ ಹೀಗಾಗಿರಲಿಲ್ಲ ಎಂದು ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

