ಮಾಜಿ ಸಿಎಂ ಜಗದೀಶ್ ಶೆಟ್ಟರ್ ‌ಮತ್ತೆ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಮಾಜಿ ಮುಖ್ಯ ಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆಯುತ್ತಾರೆ ಮತ್ತೆ ಬಿಜೆಪಿಗೆ ಹೋಗುತ್ತಾರೆ ಎಂದು ಎದ್ದಿದ್ದ
ಗೊಂದಲಗಳಿಗೆ ಇಂದು ಉತ್ತರ ಸಿಕ್ಕಿದೆ.

ಬಿಜೆಪಿಯಿಂದ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಳೆದೂ ತೂಗಿ ಮತ್ತೆ ಬಿಜೆಪಿಗೆ ವಾಪಸಾಗಿದ್ದಾರೆ

ಶೆಟ್ಟರ್ ಇಂದು ಕಾಂಗ್ರೆಸ್‌ಗೆ ಪಕ್ಷಕ್ಕೆ ಹಾಗೂ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ದೆಹಲಿಯಲ್ಲಿ ಇಂದು ಜಗದೀಶ್ ಶೆಟ್ಟರ್ ಹೈಕಮಾಂಡ್ ಜೊತೆ ಚರ್ಚಿಸಿ, ಜೆಪಿ ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಮರು ಸೇರ್ಪಡೆಯಾದರು.

ವಿಧಾನಪರಿಷತ್ತಿನ ಸದಸ್ಯತ್ವಕ್ಕೆ ನಾನು ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿಬೇಕು, ಇಲ್ಲಿಯವರೆಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ಜಗದೀಶ್‌ ಶೆಟ್ಟರ್‌,ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಬರೆದ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಅವರು ಜಗದೀಶ್ ಶೆಟ್ಟರ್ ಜತೆ ಮಾತುಕತೆ ನಡೆಸಿ, ಬಿಜೆಪಿಗೆ ವಾಪಸ್ ಬರುವಂತೆ ಆಹ್ವಾನಿದ್ದರು. ವರಿಷ್ಠರನ್ನ ಒಪ್ಪಿಸುತ್ತೇವೆ, ವರಿಷ್ಠರ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದರು.

ನಾನು ಓಪನ್ ಆಗಿದ್ದೀನಿ ಆದರೆ ಬಿಜೆಪಿಯ ನಂಬರ್ 1, 2 ಒಪ್ಪಿಗೆ ಕೊಟ್ಟು ಮಾತನಾಡಬೇಕು. ಮೋದಿ, ಅಮಿತ್ ಶಾ ಜೊತೆ ಮಾತಾನಾಡಿಸಬೇಕು. ಅಲ್ಲೇ ಮಾತುಕತೆ ಆಗಬೇಕು ಎಂದು ಶೆಟ್ಟರ್ ಹೇಳಿದ್ದರು.

ಯಡಿಯೂರಪ್ಪ ಹಾಗೂ ವಿಜಯೇಂದ್ರ ನಡೆಸಿದ ಸಂದಾನ ಫಲಪ್ರದವಾಗಿದ್ದು ಶೆಟ್ಟರ್ ಮತ್ತೆ ಬಿಜೆಪಿಗೆ ಮರು ಸೇರ್ಪಡೆ ಯಾದರು.

ಈ‌ ವೇಳೆ ಬಿ.ಎಸ್.ಯಡಿಯೂರಪ್ಪ ಹಾಜರಿದ್ದರು.