ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲು ಸಾಧ್ಯವಿಲ್ಲ: ಅಲಹಾಬಾದ್ ಹೈಕೋರ್ಟ್‌

ಲಕ್ನೋ: ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡಿರುವ ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ಅಲಹಾಬಾದ್‌ ಹೈಕೋರ್ಟ್‌ ನಿರಾಕರಿಸಿದೆ.

ಜ್ಞಾನವಾಪಿ ಮಸೀದಿ ಸಮಿತಿಗೆ ಹಿನ್ನಡೆಯಾಗಿದೆ.

ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿ ಜ್ಞಾನವಾಪಿ ಮಸೀದಿ ಸಮಿತಿ ಅಲಹಾಬಾದ್‌ ಹೈಕೋರ್ಟ್‌ ಗೆ ಮನವಿ ಸಲ್ಲಿಸಿತ್ತು.

ಜಿಲ್ಲಾ ಕೋರ್ಟ್‌ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಜತೆಗೆ ಫೆ.6 ರೊಳಗೆ ತನ್ನ ಮನವಿಗೆ ತಿದ್ದುಪಡಿ ಮಾಡಲು ಮಸೀದಿ ಸಮಿತಿಗೆ ಸೂಚನೆ ನೀಡಿದೆ.

ಹೈಕೋರ್ಟ್ ನಿರಾಕರಣೆಯಿಂದ ಜ್ಞಾನವಾಪಿ ಮಸೀದಿ ಸಮಿತಿಗೆ ಹಿನ್ನಡೆ ಆದಂತಾಗಿದೆ