ಸಿಎಂ ಹೇಳಿಕೆ ಗಮನಕ್ಕೆ ಬಂದಿಲ್ಲ;ಪ್ರತಿಕ್ರಿಯೆ ಕೊಡಲು ಹೇಗೆ ಸಾಧ್ಯ:ಯದುವೀರ್

ಮೈಸೂರು: ಸಿಎಂ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ,ಹಾಗಾಗಿ ನಾನು ಹೇಗೆ ಪ್ರತಿಕ್ರಿಯೆ ಕೊಡಲು ಸಾಧ್ಯ ಎಂದು ಮೈಸೂರು, ಕೊಡಗು ಲೋಕಸಭಾ ಬಿಜೆಪಿ ಅಭ್ಯರ್ಥಿ ಯದುವೀರ್‌ ತಿಳಿಸಿದ್ದಾರೆ.

ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಯದುವೀರ್, ನಾನು ಈಗಾಗಲೇ ಹೇಳಿದ್ದೆ, ಸಂವಿಧಾನದಲ್ಲಿ ರಾಜ ರಾಣಿ ಎಂಬ ಯಾವುದೇ ವಿಶೇಷ ಮಹತ್ವ ಇಲ್ಲ ಎಂದು, ನಾವೆಲ್ಲರೂ ಪ್ರಜೆಗಳೇ ಎಂಬುದಾಗಿ ಹೇಳಬಲ್ಲೆ ಎಂದರು.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಗ್ಗೆ ಸಿಎಂ ಸಿದ್ದರಾಮಯ್ಯ ಯಾರು ರಾಜ ಎಂದು ಕೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಯದುವೀರ್ ಸಿಎಂ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ,ಆ ವಿಚಾರದ ಬಗ್ಗೆ ನಾನು ಹೇಗೆ ಪ್ರತಿಕ್ರಿಯೆ ಕೊಡಲಿ ಎಂದು ಹೇಳಿದರು

ಸುತ್ತೂರು ಸ್ವಾಮೀಜಿಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಬೇರೆ ಯಾವ ವಿಚಾರಗಳ ಬಗ್ಗೆ ಚರ್ಚೆ ಮಾಡಿಲ್ಲ. ನಮ್ಮ ಚುನಾವಣಾ ಪ್ರಚಾರ ಎಂದಿನಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನಡೆಯುತ್ತಿದೆ.

ನಾಮಪತ್ರ ಸಲ್ಲಿಕೆ ದಿನಾಂಕ ಇನ್ನೂ ಎರಡು ಮೂರು ದಿನಗಳಲ್ಲಿ ತೀರ್ಮಾನವಾಗುತ್ತದೆ‌. ಪ್ರಧಾನಿ ಮೋದಿ ಅವರು ಪ್ರಚಾರಕ್ಕೆ ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.