ಕೇಜ್ರಿವಾಲ್‌ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ಗುರುವಾರ ದೆಹಲಿ ಹೈಕೋರ್ಟ್ ನಿರಾಕರಿಸಿತ್ತು.

ಈ ಹಿನ್ನೆಲೆಯಲ್ಲಿ ಇ.ಡಿ
12 ಅಧಿಕಾರಿಗಳ ತಂಡವು ಸರ್ಚ್ ವಾರಂಟ್‌ನೊಂದಿಗೆ ದೆಹಲಿ ಸಿಎಂ ಕೇಜ್ರಿವಾಲ್‌ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದವು.
ಈ ಸಂದರ್ಭದಲ್ಲಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು, ನಂತರ ಕೇಜ್ರಿವಾಲ್‌ ರನ್ನು ಬಂಧಿಸಿದ್ದಾರೆ.