ಬೆಂಗಳೂರಿನ 20ಕ್ಕೂ ಹೆಚ್ಚು ಕಡೆ ದಾಳಿ: ಬಿಲ್ಡರುಗಳಿಗೆ ಐಟಿ ಶಾಕ್

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಬಿಲ್ಡರು ಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಸುಮಾರು 20ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಕಡತ ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರಿನ ಕೆಆರ್ ಪುರಂ, ಕೊಡಿಗೇಹಳ್ಳಿ ಸೇರಿ ಹಲವು ಕಡೆಗಳಲ್ಲಿ ದಾಳಿ ನಡೆಸಲಾಗಿದ್ದು, ನಂಜುಂಡೇಶ್ವರ ಇನ್ಫ್ರಾಸ್ಟ್ರಕ್ಚರ್ ಪ್ರೈವೆಟ್ ಲಿಮಿಟೆಡ್ ಸೇರಿದಂತೆ ಹಲವು ಬಿಲ್ಡರುಗಳ ಕಚೇರಿ, ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.