ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಟೀಕೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ವಿರುದ್ಧ ಟೀಕಿಸಿದ್ದಾರೆ.

1974ರಲ್ಲಿ ವಿವಾದಿತ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಟ್ಟ ವಿಚಾರಕ್ಕೆ ‌ಭಾನುವಾರ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್‌ ನ್ನು ಟೀಕಿಸಿದ್ದಾರೆ.

ಕಚ್ಚತೀವು‌ ದ್ವೀಪವನ್ನು ಶ್ರೀಲಂಕಾಗೆ ಅಂದಿನ ಇಂದಿರಾ ಗಾಂಧಿ ಸರ್ಕಾರ ಹಸ್ತಾಂತರಿಸಿತ್ತು ಎಂದು ಇತ್ತೀಚೆಗೆ ಆರ್ ಟಿಐ ಮೂಲಕ ಬಹಿರಂಗವಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದಾರೆ.

ಶ್ರೀಲಂಕಾ ದ್ವೀಪ ಬಿಟ್ಟುಕೊಟ್ಟ ಇಂದಿರಾ ಗಾಂಧಿ ಸರ್ಕಾರದ ನಿರ್ಧಾರದ ಬಗ್ಗೆ ವಿವರಣೆ ನೀಡಿದ್ದ ಖಾಸಗಿ ಸುದ್ದಿ ಪತ್ರಿಕೆಯ ಲೇಖನವನ್ನು ಹಂಚಿಕೊಂಡ ಪ್ರಧಾನಿ ಮೋದಿ,ಕಣ್ಣು ತೆರೆಸುವ ಮತ್ತು ಅಚ್ಚರಿಯ ವಿಷಯ ಎಂದು ಬರೆದು ಕಾಂಗ್ರೆಸ್ ಪಕ್ಷವನ್ನು ನಂಬಲು ಸಾಧ್ಯವಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.

ದ್ವೀಪವನ್ನು ಹಸ್ತಾಂತರ ಮಾಡಿದ್ದು ಅತ್ಯಂತ ಕೆಟ್ಟ ನಿರ್ಧಾರ. 1974 ರಲ್ಲಿ ಕಾಂಗ್ರೆಸ್ ಸರ್ಕಾರವು ಕಚ್ಚತೀವು ಹಸ್ತಾಂತರಿಸಿದ್ದು ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ನಾವು ಕಾಂಗ್ರೆಸ್ ನ್ನು ಎಂದಿಗೂ ನಂಬಲು ಸಾಧ್ಯವಿಲ್ಲ. ಭಾರತದ ಏಕತೆ, ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು ದುರ್ಬಲಗೊಳಿಸುವುದು ಕಾಂಗ್ರೆಸ್‌ 75 ವರ್ಷಗಳಿಂದ ಮಾಡಿಕೊಂಡು ಬಂದಿರುವ ಕೆಲಸ ಎಂದು ಬರೆದಿದ್ದಾರೆ.