ಕಲುಷಿತ ನೀರು ಸೇವಿಸಿ ಸಾವು: ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ

ಮೈಸೂರು: ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿದ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ಪಡೆದಿದ್ದಾರೆ.

ಸಿದ್ದರಾಮಯ್ಯಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಆದೇಶಿಸಿದರು.

ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆಯೂ ಸಿಎಂ ಸೂಚಿಸಿದರು.