ಬೆಂಗಳೂರು: ಸಿಎಂ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು,ಸಿದ್ದೂಗೆ ಸಧ್ಯಕ್ಕೆ ನಿರಾಳವಾಗಿದೆ.
ಯಾವುದೇ ಎಫ್‌ಐಆರ್ ದಾಖಲಾಗಲು ಕೋರ್ಟ್ ಅನುಮತಿ ನೀಡದ ಕಾರಣ ಸಧ್ಯಕ್ಕೆ ಸಿದ್ದು ಬಿಸೋ ದೊಣ್ಣೆಯಿಂದ ಪಾರಾಗಿದ್ದಾರೆ.
ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಅದರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆ.29ರ ವರೆಗೆ ಯಾವುದೇ ಆದೇಶ ನೀಡಿದಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚನೆ ನೀಡಿದೆ.
ಸಿಎಂ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂಬ ಸುದ್ದಿ ಆಗಲೇ ಹರಡಲಾರಂಬಿಸಿತ್ತು.ಆದರೆ, ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ
ಸಿದ್ದರಾಮಯ್ಯ ಅವರಿಗೆ ಅಲ್ಪ ನೆಮ್ಮದಿ ಸಿಕ್ಕಿದಂತಾಗಿದೆ.
10 ದಿನಗಳವರೆಗೆ ವಿಚಾರಣಾ ನ್ಯಾಯಾಲಯ ಯಾವುದೇ ಆದೇಶ, ತೀರ್ಮಾನ ಪ್ರಕಟಿಸುವಂತಿಲ್ಲ ಎಂದು ಹೈಕೋರ್ಟ್ ಸೂಚಿಸಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸ್ನೇಹಮಯಿ ಕೃಷ್ಣ ಅವರು ಖಾಸಗಿ ದೂರು ನೀಡಿದ್ದರು.
ಈ ಸಂಬಂಧ ಪ್ರಕರಣ ದಾಖಲು ಮಾಡಬೇಕೋ ಅಥವಾ ಬೇಡವೋ ಎಂಬ ನಿಟ್ಟಿನಲ್ಲಿ ನ್ಯಾಯಾಲಯ ಏನು ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲ ಮೂಡಿತ್ತು.
ಈಗಾಗಲೇ ವಿಚಾರಣೆ ನಡೆಸಿದ್ದ ಕೋರ್ಟ್ ಆ.20 ಮಂಗಳವಾರ ವಿಚಾರಣೆಗೆ ಅನುಮತಿ ನೀಡಿದ್ದರೆ ಸಿಎಂ ಮೇಲೆ ಪಿಸಿಆರ್ ದಾಖಲಾಗುತ್ತಿತ್ತು. ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಹಾಗೂ ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲಾಗ್ತಿತ್ತು.
ಈಗ ಹೈಕೋರ್ಟ್ ಆಗಸ್ಟ್ 29 ರವರೆಗೆ ವಿಚಾರಣೆ ಮುಂದೂಡಿದೆ ಜೊತೆಗೆ 10 ದಿನಗಳವರೆಗೆ ವಿಚಾರಣಾ ನ್ಯಾಯಾಲಯ ಯಾವುದೇ ಆದೇಶ, ತೀರ್ಮಾನ ಪ್ರಕಟಿಸುವಂತಿಲ್ಲ ಎಂದು ಆದೇಶಿಸಿದೆ.
ಹಾಗಾಗಿ ಜನಪ್ರತಿನಿಧಿಗಳ ಕೋರ್ಟ್ ಆದೇಶಕ್ಕೂ ತಡೆ ಸಿಕ್ಕಿದಂತಾಗಿದೆ. ಹೈಕೋರ್ಟ್ ಮಧ್ಯಂತರ ಆದೇಶದಿಂದ ಸಿಎಂಗೆ ಆ.29ರವರೆಗೂ ನೆಮ್ಮದಿ ಸಿಕ್ಕಿದಂತಾಗಿದೆ.

