ಧನ್ ಧಾನ್ಯ ಕೃಷಿ ಯೋಜನೆ ಘೋಷಿಸಿದ ವಿತ್ತ ಸಚಿವೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ವಿಶೇಷವಾಗಿ ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಿಸಿದ್ದಾರೆ.

ಇದು ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಶನಿವಾರ 2025-26ರ ಕೇಂದ್ರ ಬಜೆಟ್ ಮಂಡಿಸಿದ ಸಚಿವರು ಈ ಯೋಜನೆ ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ’ಯು ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಇದು ಸಾಂಸ್ಕೃತಿಕ ಉತ್ಪಾದಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.
ತರಕಾರಿಗಳು, ಹಣ್ಣುಗಳ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಲಾಭದಾಯಕ ಬೆಲೆಗಳನ್ನು ಒದಗಿಸಲು ಸಮಗ್ರ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಕೃಷಿಯಿಂದ ಉದ್ಯೋಗ ಸೃಷ್ಟಿಯಾಗಲಿದೆ. ಇದರಿಂದ ಬೇರೆಡೆ ವಲಸೆ ತಡೆಯಬಹುದು. ಯುವಕರನ್ನು ಕೃಷಿಯತ್ತ ಸೆಳೆಯುವ ಉದ್ದೇಶ ಹೊಂದಿದೆ. ಎನ್‌ಸಿಸಿಎಫ್ ಕಡೆಯಿಂದ ಧಾನ್ಯಗಳ ಸಂಗ್ರಹಣೆ ಮಾಡಲಾಗುವುದು. ಹಣ್ಣು ಮತ್ತು ತರಕಾರಿ ಬೆಳೆಗೆ ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಹತ್ತಿ ಬೆಳೆಗೆ ಈ ಐದು ವರ್ಷದಲ್ಲಿ ಆದ್ಯತೆ ನೀಡಲಿದ್ದು, ತಂತ್ರಜ್ಞಾನದ ಸಹಕಾರ ನೀಡಲಾಗುವುದು, ಇದು ಟೆಕ್ಸ್‌ಟೈಲ್ಸ್‌ ವಲಯದಲ್ಲಿ ಹೆಚ್ಚು ಆದಾಯ ತಂದು ಕೊಡಲಿದೆ ಎಂದು ತಿಳಿಸಿದ್ದಾರೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಮಿತಿ ಹೆಚ್ಚಳ ಮಾಡಲಾಗಿದೆ. ಐದು ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.