ಮೈಸೂರು: ರಾಜ್ಯದ ಹಲವು ವಿಶ್ವವಿದ್ಯಾನಿಲಯ ಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರ ನಿಲುವನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಬೆಂಬಲಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಒಳ್ಳೆಯ ನಿರ್ಧಾರ, ಜಿಲ್ಲೆಗೊಂದು ವಿ.ವಿ ಕೊಟ್ಟರೇ ಏನಾಗಬೇಕು, ಗ್ರ್ಯಾಂಟೇ ಕೊಟ್ಟಿಲ್ಲ ಎಂದು ತಿಳಿಸಿದರು.
ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ಫಿಕ್ಸ್ ಮಾಡಿದ್ದೇ ಈ ಹಿಂದಿನ ಬಿಜೆಪಿ ಸರ್ಕಾರ ಎಂದು ತಮ್ಮದೇ ಪಕ್ಷವನ್ನು ಕುಟುಕಿದರು.
ರಾಜ್ಯದಲ್ಲಿ ಶಾಂತಿಗೆ ಅವಕಾಶ ಇಲ್ಲದಂತಾಗಿದೆ ಎಲ್ಲಾ ಕಡೆ ಪ್ರಕ್ಷುಬ್ಧತೆ, ಗಲಾಟೆ ಗಲಭೆ,ಕೊಲೆ, ಆತ್ಮಹತ್ಯೆಗಳು ನಡೆಯುತ್ತಿವೆ. ಇದಕ್ಕೆಲ್ಲಾ ಯಾರು ಕಾರಣ, ಜನ ಕಾರಣ ಅಲ್ಲ. ನಾವು ಆಯ್ಕೆ ಮಾಡಿದ ಸರ್ಕಾರ ಕಾರಣ,ಸರ್ಕಾರದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಇದಕ್ಕೆಲ್ಲ ಉತ್ತರ ಕೊಡಬೇಕು ಎಂದು ವಿಶ್ವನಾಥ್ ಹೇಳಿದರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಸಕಾಂಗಕ್ಕೆ ಬೆಲೆಯೇ ಇಲ್ಲದಂತಾಗಿದೆ. ಬಜೆಟ್ ಕುರಿತು ಶಾಸಕಾಂಗ ಒಪ್ಪಿಗೆ ನೀಡುತ್ತದೆ. ಆದರೆ ಸರ್ಕಾರ ಶಾಸಕಾಂಗ ಒಪ್ಪಿಗೆ ನೀಡಿದ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಏನು ಮಾಡಿದೆ. ಕಳೆದ ಬಾರಿಯ ಬಜೆಟ್ ಏನಾಯಿತು ಎಂದು ಪ್ರಶ್ನಿಸಿದರು.
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಉತ್ತರಪ್ರದೇಶ ಸರ್ಕಾರ ಮಾಡಿರುವ ವ್ಯವಸ್ಥೆ ಅತ್ಯುತ್ತಮವಾಗಿದೆ. ಸಣ್ಣಪುಟ್ಟ ಘಟನೆ ಹೊರತುಪಡಿಸಿ ಇಡೀ ಕುಂಭಮೇಳದ ವ್ಯವಸ್ಥೆ ಚೆನ್ನಾಗಿದೆ ಶ್ಲಾಘಿಸಿದರು.

