ದೆಹಲಿ ನೂತನ ಸಿಎಂ ರೇಖಾ ಗುಪ್ತ

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ‌ ಪ್ರಮಾಣ ವಚನ ಸ್ವೀಕರಿಸಿದರು.

ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾದ ರೇಖಾ ದಾಸ್ ಅವರು ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಗುರುವಾರ ನಡೆದ ಬೃಹತ್‌ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ವಿ.ಕೆ ಸಕ್ಸೆನಾ ಪ್ರಮಾಣ ವಚನ ಬೋಧಿಸಿದರು.

ಇದೇ ಸಂದರ್ಭದಲ್ಲಿ ಸಚಿವರಾಗಿ ಪರ್ವೇಶ್ ಸಾಹಿಬ್ ಸಿಂಗ್, ಆಶಿಶ್ ಸೂದ್, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದರ್ ಇಂದ್ರಜ್ ಸಿಂಗ್, ಕಪಿಲ್ ಮಿಶ್ರಾ ಮತ್ತು ಪಂಕಜ್ ಕುಮಾರ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದರು.

ರೇಖಾ ಗುಪ್ತ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಮೂಲಕ ರಾಷ್ಟ್ರ ರಾಜಧಾನಿಯ 4ನೇ ಮಹಿಳಾ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ.

ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜನಾಥ್‌ ಸಿಂಗ್‌ ಸೇರಿದಂತೆ ಹಲವು ಕೇಂದ್ರ ಸಚಿವರು, ಚಂದ್ರಬಾಬು ನಾಯ್ಡು ಹಾಗೂ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.