ಮೈಸೂರು: ವೇಶ್ಯಾವಟಿಕೆ ನಡೆಸುತ್ತಿದ್ದ ಮನೆ ಮೇಲೆ ಮೈಸೂರಿನ ಸರಸ್ವತಿಪುರಂ ಠಾಣೆ ಪೊಲೀಸರು ದಾಳಿ ಮಾಡಿ ಇಬ್ಬರು ಯುವತಿಯರನ್ನ ರಕ್ಷಿಸಿದ್ದಾರೆ.
ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು ನೀಡಿದ ಸುಳಿವಿನ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಸರಸ್ವತಿಪುರಂ 14ನೇ ಮುಖ್ಯರಸ್ತೆ ಬಳಿ ಇರುವ ಮನೆಯೊಂದರಲ್ಲಿ ವೇಶ್ಯಾವಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆದರಿಸಿ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ ಪೊಲೀಸರು
ವೇಶ್ಯಾವಟಿಕೆ ನಡೆಸುತ್ತಿದ್ದ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

