ನಿಂತಿದ್ದ ಟ್ರಕ್ ಗೆ ಮತ್ತೊಂದು ಟ್ರಕ್ ಡಿಕ್ಕಿ: ಮೂವರ ಸಾವು

ಚಿತ್ರದುರ್ಗ: ನಿಂತಿದ್ದ ಟ್ರಕ್ ಗೆ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಮಂಗಳವಾರ ಮುಂಜಾನೆ ಸಿಬಾರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು,ಎರಡೂ ಟ್ರಕ್ ಗಳು ಸಂಪೂರ್ಣ ನಜ್ಜುಗುಜ್ಜಾಗಿದೆ.

ನಿದ್ರೆ ಮಂಪರಿನಲ್ಲಿ ಟ್ರಕ್ ಚಾಲಕ ಡ್ರೈವ್ ಮಾಡಿದ್ದರಿಂದ ಅಪಘಾತವಾಗಿದೆ, ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.