ಚಂಡೀಗಢ: ದುಷ್ಟರಿಗೆ ಶಿಕ್ಷೆ ಕೊಡಬೇಕಾದ ಪೊಲೀಸ್ ಕೆಟ್ಟ ಕೆಲಸ ಮಾಡಿ ಶಿಕ್ಷೆ ಅನುಭವಿಸಬೇಕಾಗಿ ಬಂದ ಪ್ರಕರಣ ಚಂಡೀಗಢ ದಲ್ಲಿ ನಡೆದಿದೆ.
2 ಕೋಟಿ ಮೌಲ್ಯದ ಹೆರಾಯಿನ್ ಜೊತೆ ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್ ಒಬ್ಬರನ್ನು ಬಂಧಿಸಲಾಗಿದೆ.
17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್‌ಸ್ಟೇಬಲ್ ಅಮನ್‌ದೀಪ್ ಕೌರ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಆಕೆಯನ್ನು ಜಿಲ್ಲಾ ನ್ಯಾಯಾಲಯ ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಆಕೆಯನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು, ಆಕೆಯ ಆಸ್ತಿಗಳ ತನಿಖೆ ನಡೆಯುತ್ತಿದೆ.
ಆರೋಪಿಯು ಆದಾಯದ ಮೂಲಕ್ಕಿಂತ ಹೆಚ್ಚಿನ ಆಸ್ತಿಯನ್ನು ಸಂಗ್ರಹಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಆಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಐಜಿ ಪ್ರಧಾನ ಕಚೇರಿಯ ಸುಖ್‌ಚೈನ್ ಸಿಂಗ್ ಗಿಲ್ ತಿಳಿಸಿದ್ದಾರೆ.
ಈ ಹಿಂದೆ ಪೊಲೀಸರು ಕಾನ್‌ಸ್ಟೇಬಲ್ ಮೇಲೆ ಡೋಪ್ ಪರೀಕ್ಷೆ ನಡೆಸಿದ್ದರು. ಆದರೆ ಅದು ನೆಗೆಟಿವ್ ಬಂದಿತ್ತು. ನಗರ ಡಿಎಸ್‌ಪಿ ಹರ್ಬನ್ಸ್ ಸಿಂಗ್ ಧಲಿವಾಲ್, ಗೌಪ್ಯ ಮಾಹಿತಿಯ ಆಧಾರದ ಮೇಲೆ ಪೊಲೀಸರ ತಂಡವು ಲಾಡ್ಲಿ ಧಿ ಚೌಕ್ ಬಳಿಯ ಮೇಲ್ಸೇತುವೆಯ ಕೆಳಗೆ ಚೆಕ್‌ಪಾಯಿಂಟ್ ಅನ್ನು ಸ್ಥಾಪಿಸಿತು.
ಈ ವೇಳೆ, ಅಮನ್‌ದೀಪ್ ಕಾರನ್ನು ತಡೆದು ತಪಾಸಣೆಗೆ ಒಳಪಡಿಸಿದಾಗ ಅದರಲ್ಲಿ 17.71 ಮಿ.ಗ್ರಾಂ ಹೆರಾಯಿನ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.