ಸುಸೂತ್ರವಾಗಿ ಸಿಇಟಿ ಪರೀಕ್ಷೆ ಪ್ರಾರಂಭ

ಮೈಸೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತಿಪರ ಕೋರ್ಸ್ ಗಳ ಪ್ರವೇಶಾತಿ ಸಂಬಂಧ ಏ.16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪ್ರಾರಂಭವಾಗಿದೆ.

ಮೈಸೂರಿನ 38 ಕೇಂದ್ರಗಳಲ್ಲಿ 17,313 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದಾರೆ

ಇಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಿತು.

ಏ.17ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 11.50ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

ಪರೀಕ್ಷೆಯನ್ನು ಆಫ್‌ಲೈನ್ ಮೋಡ್‌ನಲ್ಲಿ ಒಎಂಆರ್ ಹಾಳೆಗಳನ್ನು ಬಳಸಿ ನಡೆಸಲಾಗುತ್ತಿದೆ.

ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಯಲಿದ್ದು, ಸುಗಮ ಸಂಚಾರ ದೃಷ್ಟಿಯಿಂದ ಮಾರ್ಗ ಬದಲಾವಣೆ ಮಾಡಲಾಗಿದೆ.

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿ, ಜಿಪಂ ಸಿಇಒ ಸಂಪೂರ್ಣ ಸಿದ್ಧತೆ ಮಾಡಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮರಿಸ್ವಾಮಿ ತಿಳಿಸಿದ್ದಾರೆ.