ಉಗ್ರರ ವಿರುದ್ದ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ:ಸಿದ್ದರಾಮಯ್ಯ

ಮೈಸೂರು: ನಾನು ಯುದ್ದದ ಪರ ಅಲ್ಲ ಶಾಂತಿಯ ಪರ, ಯುದ್ದದ ಬದಲು ಪಾಕಿಸ್ತಾನ ಮತ್ತು ಉಗ್ರರ ವಿರುದ್ದ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಪಾಕ್ ಜೊತೆ ಯುದ್ಧದ ಅನಿವಾರ್ಯತೆ ಈಗ ಇಲ್ಲ ಎಂದು ಹೇಳಿದರು.

ಯುದ್ಧದ ಅನಿವಾರ್ಯತೆ ಈಗಿಲ್ಲದಿದ್ದರೂ ಕಠಿಣ ಕ್ರಮ ಕೈಗೊಳ್ಳಬೇಕಿದೆ, ಭಾರತ ಶಾಂತಿಪ್ರಿಯ ದೇಶ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಭದ್ರತಾ ವೈಫಲ್ಯವನ್ನು ಒಪ್ಪಿದೆ, ಪ್ರವಾಸಿಗರಿಗೆ ಕೇಂದ್ರ ಭದ್ರತೆ ನೀಡಿಲ್ಲ ಎಂದು ಟೀಕಿಸಿದರು.

ಕೇಂದ್ರ ಸರ್ಕಾರ ಕೈಗೊಡ ಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಬೆಂಗಳುರು ಸೇರಿದಂತೆ ರಾಜ್ಯದಲ್ಲಿ ಪಾಕ್ ಪ್ರಜೆಗಳ ಪತ್ತೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪಾಕ್ ಪ್ರಜೆಗಳನ್ನ ಪತ್ತೆ ಹಚ್ಚಿ ಕೇಂದ್ರಕ್ಕೆ ಮಾಹಿತಿ ನೀಡುತ್ತೇವೆ, ಕೇಂದ್ರದ ಸೂಚನೆಗೆ ನಾವು ಸಹಕಾರ ಕೊಡುತ್ತೇವೆ.ರಾಜ್ಯದಲ್ಲಿ ಎಷ್ಟು ಜನ ಪಾಕಿಸ್ತಾನ ಪ್ರಜೆಗಳು ಇದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ,ಬೆಂಗಳೂರಿನಲ್ಲಿ ಅತಿ ಹೆಚ್ಚು ಜನರು ಇರುವ ಸಾಧ್ಯತೆ ಇದೆ, ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳುತ್ತೇವೆ‌,
ಕೇಂದ್ರದ ಸೂಚನೆಯನ್ನ ನಾವು ಪಾಲಿಸುತ್ತೇವೆ‌ ಎಂದು ಸಿಎಂ ಪುನರುಚ್ಛರಿಸಿದರು

ಕಾಶ್ಮೀರದ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ, ಭದ್ರತೆ ಇದೆ ಎಂದು ನಂಬಿಕೊಂಡು ಜನ ಕಾಶ್ಮೀರಕ್ಕೆ ಹೋದರು,ಆದರೆ
ಆದರೆ ಅಲ್ಲಿ ಭದ್ರತೆ ವೈಫಲ್ಯ ಉಂಟಾಗಿದೆ,
ಹಾಗಾದರೆ ಇವರು ಮಾಡಿದ್ದು ಬರೀ ಭಾಷಣನಾ,
ಈಗ ಏನೇ ಕ್ರಮಕೈಗೊಂಡರು ಹೋದ 26 ಜೀವ ವಾಪಸ್ ತರಲು ಸಾಧ್ಯನಾ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದರು.

ಸರ್ವ ಪಕ್ಷ ಸಭೆಗೆ ಪ್ರಧಾನಿ ಹೋಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಇಂತಹ ಸಭೆಗಿಂತ ಮಹತ್ವದ ಸಭೆ ಯಾವುದು ಇದೆ ಹೇಳಿ,ಚುನಾವಣಾ ಪ್ರಚಾರದ ಭಾಷಣ ಮುಖ್ಯನಾ, ಸಭೆ ಮುಖ್ಯಾನಾ. ಇವರಿಗೆ ಪರಿಸ್ಥಿತಿಯ ಗಂಭೀರತೆ ಗೊತ್ತಿದ್ಯಾ ಎಂದು ಕಾರವಾಗಿ ಪ್ರಶ್ನಿಸಿದರು.

ಈಗ ಚಾಮರಾಜನಗರ ವಿಚಾರದಲ್ಲಿ ಯಾವ ಮೌಢ್ಯವೂ ಇಲ್ಲ, ನಾನು ಈಗಾಗಲೇ‌ 20 ಸರಿ ಹೋಗಿದ್ದೇನೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ‌ ಸಿದ್ದರಾಮಯ್ಯ, ನಾನು ಈಗ ಆರೋಗ್ಯವಾಗಿದ್ದೇನೆ‌, ಶೇ. 90ರಷ್ಟು ನೋವು ಇಲ್ಲ, ಸ್ವಲ್ಪ ನೋವಿದೆ, ಆಗಾಗ ರೆಸ್ಟ್ ಮಾಡುತ್ತೇನೆ ಎಂದು ತಿಳಿಸಿದರು.