ಹೊತ್ತಿ ಉರಿದ ಖಾಸಗಿ ಬಸ್

ಮಂಡ್ಯ: ಚಲಿಸುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ.

ಬಸ್ನಲ್ಲಿದ್ದ 25 ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟಾವಶಾತ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.

ಬೆಂಗಳೂರು-ಮಂಗಳೂರು ಹೈವೇಯಲ್ಲಿ ಉಡುಪಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ನಲ್ಲಿ ಬೆಳಗಿನ ಜಾವ 5 ಗಂಟೆಯಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿಗೆ ಕಾಣಿಸಿಕೊಂಡಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರನ್ನ ಬಸ್ ನಿಂದ ಕೆಳಗಿಳಿಸಲಾಗಿದ್ದು ಎಲ್ಲರೂ ಪಾರಾಗಿದ್ದಾರೆ.

ಅಗ್ನಿಶಾಮಕ ದಳ ಸಿಬ್ಬಂದಿ ಸುದ್ದಿ ತಿಳಿದು ಧಾವಿಸಿ ಬಂಕಿ ನಂದಿಸುವ ಕಾರ್ಯ ಮಾಡಿದರು.ಆದರೆ ಬಸ್ ಹೊತ್ತಿ ಉರಿದು ಸುಟ್ಟುಕರುಕಲಾಗಿದೆ.

ಚಾಲಕನ ಸಮಯ ಪ್ರಜ್ಞೆಯಿಂದ 25ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಿಂಡಿಗನವಿಲೆ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.