ಮೈಸೂರು: ಬರುವ ಮೇ 4ರಂದು ನೀಟ್ ಪರೀಕ್ಷೆ ನಡೆಯಲಿದ್ದು, ಯಾವುದೇ ಲೋಪವಾಗ ದಂತೆ ಸುಗಮ ಹಾಗೂ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೀಟ್ ಪರೀಕ್ಷೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು,
ಮೈಸೂರು ಜಿಲ್ಲೆಯಲ್ಲಿ 20 ಪರೀಕ್ಷಾ ಕೇಂದ್ರಗಳಲ್ಲಿ 7,709 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಲಿದ್ದು ನೀಟ್ ಪರೀಕ್ಷೆ ಸುಗಮವಾಗಿ, ನ್ಯಾಯಯುತವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವವರಿಗೆ ನೀಟ್ ಪರೀಕ್ಷೆ ನಡೆಸಲಾಗುತ್ತದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪರೀಕ್ಷೆ ನಡೆಸುತ್ತಿದ್ದು ಅವರು ನೀಡುವ ಗೈಡ್ ಲೈನ್ಸ್ ಗಳ ಪ್ರಕಾರ ನೇಮಕವಾಗಿರುವ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಆದೇಶಿಸಿದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು, ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಯಾವುದೇ ತೊಂದರೆ ಆಗದಂತೆ ನೇಮಕವಾದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ನೂತನ್ ಪುಂಜ್, ಮಿತಿಲೇಶ್ ಕುಮಾರ್ ಹಾಗೂ ಕಾಲೇಜಿನ ಪ್ರಾಂಶುಪಾಲರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.