ಪಾಕಿಸ್ತಾನ ಪರ ಯಾರೇ ಘೋಷಣೆ ಕೂಗಿದರೂ ಅದು ದೇಶದ್ರೋಹ-ಸಿಎಂ

ಬೆಂಗಳೂರು: ಪಾಕಿಸ್ತಾನ ಪರ ಯಾರೇ ಘೋಷಣೆ ಕೂಗಿದರೂ ತಪ್ಪು,ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.

ಮಂಗಳೂರಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂದಿದ್ದಕ್ಕೆ ಹತ್ಯೆಯಾಗಿದೆ ಎಂಬ ಆರೋಪ ಇದೆಯಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಯಾರು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದ್ರು, ಯಾರೇ ಪಾಕಿಸ್ತಾನ ಪರ ಘೋಷಣೆ ಕೂಗಿದರೂ ಅದು ತಪ್ಪು‌ಈ ಬಗ್ಗೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಯಾರೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ರು ತಪ್ಪೇ, ಅದು ದೇಶದ್ರೋಹ. ತನಿಖೆ ನಡೆಯುತ್ತಿದೆ,15 ಜನರನ್ನ ಬಂಧಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.