ಮಂಗಳೂರು: ಮಂಗಳೂರಿನ ಸೂರತ್ಕಲ್ ನಲ್ಲಿ ನಡೆದಿದ್ದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ರಾತ್ರಿ ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಿದ್ದು,ಕರಾವಳಿ ಜನ ಬೆಚ್ಚಿಬಿದ್ದಿದ್ದಾರೆ.
ಸುಹಾಸ್ ಶಟ್ಟಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಲಾಗಿದೆ. ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಹಲವು ಕೊಲೆ, ಕೊಲೆಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದರ ಪ್ರಕರಣಗಳು ದಾಖಲಾಗಿವೆ.
ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ವೃತ್ತದಲ್ಲಿ ಸುಹಾಸ್ ಶಟ್ಟಿಯನ್ನು ಅಟ್ಟಾಡಿಸಿ ಕೊಚ್ವಿ ಕೊಲ್ಲುವ ದೃಷ್ಯಾವಳಿ ವೈರಲ್ ಆಗಿದೆ.
2022ರ ಜುಲೈ 28ರಂದು ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಮಾಡಲಾಗಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್ ನನ್ನು ಹತ್ಯೆ ಮಾಡಲಾಗಿತ್ತು.
ಫಾಜಿಲ್ ಹತ್ಯೆ ಕೇಸ್ ನಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ. ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದನು. ಹತ್ಯೆ ಪ್ರಕರಣದಲ್ಲಿ ಭಾಗಿಯಾದ ನಂತರ ಯಾವುದೇ ಜವಾಬ್ದಾರಿ ಇರಲಿಲ್ಲ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುಹಾಸ್ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆತ ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಸುಹಾಸ್ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರಿನ ಎ.ಜೆ ಆಸ್ಪತ್ರೆ ಎದುರು ಹಿಂದೂ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಬಜಿಪಿ ಮತ್ತು ಹಿಂದೂ ಮುಖಂಡರು ಆಸ್ಪತ್ರೆಗೆ ಧಾವಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬಜಪೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.