ಸುಹಾಸ್ ಶೆಟ್ಟಿ ಹತ್ಯೆ;8 ಮಂದಿ ಬಂಧನ-ಪರಮೇಶ್ವರ್

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳೂರಿಗೆ ಭೇಟಿ ನೀಡಿದ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹಾಳಾಗಲು ನಾವು ಬಿಡುವುದಿಲ್ಲ ಎಂದು ಭರವಸೆ ನೀಡಿದರು ‌

ಯಾವುದೇ ಸಮುದಾಯದವರಾದರೂ ಕೂಡ ಕಾನೂನು ಉಲ್ಲಂಘಿಸಬಾರದು ಎಂದು ಎಚ್ಚರಿಕೆ ನೀಡಿದರು.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು 5 ತಂಡಗಳನ್ನು ರಚಿಸಿ ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಸದ್ಯಕ್ಕೆ 8 ಮಂದಿ ಶಂಕಿತ ಆರೋಪಿಗಳು ಸಿಕ್ಕಿದ್ದಾರೆ ಎಂದು ತಿಳಿಸಿದರು.

ಅಬ್ದುಲ್ ಸಫ್ವಾನ್, ನಿಯಾಜ್, ಎಂಡಿ ಮುಜಾಮಿಲ್, ಕಲಂದರ್ ಶಫಿ, ಆದಿಲ್ ಮೆಹರೂಫ್, ನಾಗರಾಜ್, ಎಂಡಿ ರಿಜ್ವಾನ್ ಮತ್ತು ರಂಜಿತ್ ಬಂಧಿತರೆಂದು ಪರಮೇಶ್ವರ್ ತಿಳಿಸಿದರು.