ಬೆಂಗಳೂರು: ಪಾಕಿಸ್ತಾನದ ವಿರುದ್ಧ ಭಾರತ ಯಾವ ಕ್ಷಣದಲ್ಲಿ ಕಠಿಣ ನಿರ್ಧಾರ ತೆಗೆದುಕೊಳ್ಳಬಹುದಾದ ಸನ್ನಿವೇಶ ಈಗ ಸೃಷ್ಟಿಯಾಗಿದೆ.
ಹಾಗಾಗಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬ್ಯಾಕ್ ಟು ಬ್ಯಾಕ್ ಸಭೆಗಳನ್ನ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಷ್ಟ್ರೀಯ ಭದ್ರತಾ ಅಧಿಕಾರಿಗಳು, ಸಲಹೆಗಾರ ಅಜಿತ್ ಧೋವಲ್ ಜೊತೆ ನಿರಂತರ ಮಾತುಕತೆ ನಡೆಸಿದ್ದಾರೆ.
ಈ ನಡುವೆ ಕೇಂದ್ರ ಗೃಹ ಇಲಾಖೆ ದೇಶದ ಎಲ್ಲಾ ರಾಜ್ಯಗಳಿಗೆ ಮೇ 07 ಮಾಕ್ ಡ್ರಿಲ್ ಮಾಡುವಂತೆ ಸಂದೇಶ ರವಾನಿಸಿದೆ.
ಇನ್ನು ಬೆಂಗಳೂರಿನ 35 ಕಡೆ ಸೈರನ್ ಇದ್ದು, ಇವುಗಳ ಪೈಕಿ 32 ಕಡೆ ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ ಸೈರನ್ ಕಾರ್ಯನಿರ್ವಹಿಸುವ ಕಡೆಗಳಲ್ಲಿ ನಾಳೆ ಮಾಕ್ ಡ್ರಿಲ್ ಅಂದರೆ ಅಣಕು ಕವಾಯತು ನಡೆಯಲಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್, ಸಿಕ್ಯುಎಎಲ್, ಇಎಸ್ಐ ಆಸ್ಪತ್ರೆ, ಎನ್ಎಎಲ್, ಬೆಂಗಳೂರು ಡೈರಿ, ಕೆನರಾ ಬ್ಯಾಂಕ್,ಎಸ್ ಆರ್ ಎಸ್ ಪೀಣ್ಯ, ವಿವಿ ಟವರ್ ಅಗ್ನಿಶಾಮಕ ಠಾಣೆ, ಜ್ಞಾನಭಾರತಿ ಅಗ್ನಿಶಾಮಕ ಠಾಣೆ, ಥಣಿಸಂದ್ರ ಅಗ್ನಿಶಾಮಕ ಠಾಣೆ, ಬಾಣಸವಾಡಿ ಅಗ್ನಿಶಾಮಕ ಠಾಣೆ, ಯಶವಂತಪುರ ಅಗ್ನಿಶಾಮಕ ಠಾಣೆ, ಬನಶಂಕರಿ ಅಗ್ನಿಶಾಮಕ ಠಾಣೆ, ರಾಜಾಜಿನಗರ ಅಗ್ನಿಶಾಮಕ ಠಾಣೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ, ಹಲಸೂರು ಗೇಟ್ ಠಾಣೆ, ಹಲಸೂರು ಪೊಲೀಸ್ ಠಾಣೆ, ಉಪ್ಪಾರಪೇಟೆ ಪೊಲೀಸ್ ಠಾಣೆ, ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ, ಕಾಮಾಕ್ಷಿಪಾಳ್ಯ ಠಾಣೆ, ಕೆ.ಆರ್.ಮಾರ್ಕೆಟ್ ಪೊಲೀಸ್ ಠಾಣೆ, ವೈಯಾಲಿಕಾವಲ್ ಠಾಣೆ, ಹಲಸೂರು ಗೃಹರಕ್ಷಕದಳ ಕೇಂದ್ರ ಕಚೇರಿ, ಪೀಣ್ಯ ಅಗ್ನಿಶಾಮಕ ಠಾಣೆ, ಬೆಂಗಳೂರು ಗ್ರಾಮಾಂತರ ಗೃಹರಕ್ಷಕದಳ ಕಚೇರಿ, ಬಾಗಲೂರು ಅಗ್ನಿಶಾಮಕ ಠಾಣೆ, ಅಂಜನಾಪುರ ಅಗ್ನಿಶಾಮಕ ಠಾಣೆ,ಐಟಿಪಿಎಲ್ ಅಗ್ನಿಶಾಮಕ ಠಾಣೆ, ಸರ್ಜಾಪುರ ಅಗ್ನಿಶಾಮಕ ಠಾಣೆ, ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣೆ ಮತ್ತು ಡೈರಿ ಸರ್ಕಲ್ ಅಗ್ನಿಶಾಮಕ ಠಾಣೆಯಲ್ಲಿ ಮಾಕ್ ಡ್ರಿಲ್ ನಡೆಯಲಿದೆ.
ನಾಳೆಯ ಮಾಕ್ ಡ್ರಿಲ್ ನಲ್ಲಿ ಸೈರನ್ ಹಾಕಲಾಗುತ್ತದೆ. ಮೂರು ಹಂತದಲ್ಲಿ ಸೈರನ್ ಆನ್ ಮಾಡಲಾಗುತ್ತದೆ.
ಸೈರನ್ ಸಹ ಮೂರು ರೀತಿಯ ಶಬ್ದ ಮಾಡುತ್ತದೆ. ಈ ಸೈರನ್ ಸುಮಾರು 3ಕಿ.ಮೀ. ವ್ಯಾಪ್ತಿಯವ ವರೆಗೂ ಕೇಳತ್ತದೆ.
ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್ ಡ್ರಿಲ್ಗೆ ನಿರ್ಧಾರಿಸಲಾಗಿದೆ.
1971ರ ನಂತರ ಅಂದ್ರೆ 54 ವರ್ಷದ ಬಳಿಕ ದೇಶದಲ್ಲಿ ರಕ್ಷಣಾ ಮಾಕ್ ಡ್ರಿಲ್ ನಡೆಸಲು ಕೇಂದ್ರ ಸರ್ಕಾರ ಸೂಚನೆ ನೀಡಿರುವುದು ಜನರಲ್ಲಿ ಒಂದು ರೀತಿ ಆತಂಕ ತಂದಿದೆ.
1971ರಲ್ಲಿ ಭಾರತ, ಪಾಕಿಸ್ತಾನ ನಡುವೆ ಯುದ್ಧ ನಡೆದಾಗ ಈ ರಕ್ಷಣಾ ಮಾಕ್ ಡ್ರಿಲ್ ನಡೆಸಲಾಗಿತ್ತು. ಆದಾದ ಬಳಿಕ ಎಂದೂ ಕೂಡ ದೇಶದಲ್ಲಿ ರಕ್ಷಣಾ ಮಾಕ್ ಡ್ರಿಲ್ ನಡೆಸಿಲ್ಲ. ಕಾರ್ಗಿಲ್ ಯುದ್ಧದ ವೇಳೆಯೂ ಮಾಕ್ ಡ್ರಿಲ್ ನಡೆಸಿರಲಿಲ್ಲ.
ಈ ಮಾಕ್ ಡ್ರೀಲ್ ಮಾಡುವ ಉದ್ದೇಶವೆಂದರೆ ಯುದ್ಧ ನಡೆದದ್ದೇ ಆದಲ್ಲಿ ಆ ಸಂದರ್ಭದಲ್ಲಿ ದಾಳಿಯಾದರೆ ನಮ್ಮ ರಕ್ಷಣೆ ಹೇಗೆ ಮಾಡಿಕೊಳ್ಳಬೇಕು, ಸೈರನ್ ಆದಾಗ ನಾವು ಏನ ಮಾಡಬೇಕು, ಸುರಕ್ಷಿತ ಸ್ಥಳಕ್ಕೆ ಹೇಗೆ ಹೋಗ ಬೇಕು, ಸಾವು ನೋವು ಸಂಭವಿಸಿದರೆ ನಮ್ಮ ಚಿಕಿತ್ಸೆ ಹೇಗೆ ಮಾಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ಇರುವ ರೋಗಿಗಳು ಹೇಗೆ ಸುರಕ್ಷತವಾಗಿರಬಹುದು? ರಕ್ತನಿಧಿಗಳಲ್ಲಿ ಹಾಗೂ ಆಸ್ಪತ್ರೆಯಲ್ಲಿ ಅಗತ್ಯ ಸಲಕರಣೆ ಚೆಕ್ ಮಾಡುವುದು. ಬೆಡ್, ಮಾತ್ರೆಗಳು, ಔಷಧಿಗಳನ್ನು ಹೇಗೆ ಶೇಕರಣೆ ಮಾಡುವುದು ಎಂದು ನೋಡುವುದು ಎಂಬ ಬಗ್ಗೆ ಅಣಕು ಪ್ರದರ್ಶನ ಮಾಡಿ ತೋರಿಸಲಾಗುತ್ತದೆ.
ಮಾಕ್ ಡ್ರಿಲ್ ಆದರೆ ಯುದ್ದ ಗ್ಯಾರಂಟಿ. ಕೆಲವೇ ದಿನಗಳಲ್ಲಿ ದಾಳಿ ನಡೆಯಲಿದೆ, ಮಾಕ್ ಡ್ರಿಲ್ ಸಮಯದಲ್ಲಿ ಯುದ್ದದ ಪೂರ್ವ ತಯಾರಿ ಬಗ್ಗೆ ಸಿದ್ದತೆ ಮಾಡಿಕೊಳ್ಳಲಾಗುತ್ತದೆ. ಈ ಸಮಯದಲ್ಲಿ ಜನರು ದೇಶದ ಪರ ನಿಲ್ಲಬೇಕು. ಸೈನಿಕರ ನೈತಿಕ ಸ್ಥೈರ್ಯ ಹೆಚ್ಚಿಸುವಂತೆ ನಡೆದುಕೊಳ್ಳಬೇಕು ಎನ್ನವುದು ಇದರ ಅರ್ಥ.
ಮಾಕ್ ಡ್ರಿಲ್ ವೇಳೆ ಏನೆಲ್ಲ ನಡೆಯುತ್ತೆ..?
ಅಣಕು ಕವಾಯತಿನ ಅಡಿಯಲ್ಲಿ ವಾಯುದಾಳಿ ಎಚ್ಚರಿಕೆ ಸೈರನ್‌ಗಳನ್ನು ನಿರ್ವಹಿಸಲಾಗುತ್ತದೆ. ಇದು ಪ್ರಮುಖ ಅಪಾಯ ಮತ್ತು ಶತ್ರು ಚಟುವಟಿಕೆಗಳ ಕುರಿತು ಎಚ್ಚರಿಕೆಯನ್ನು ನೀಡುವುದಕ್ಕೆ ಸಂಬಂಧಿಸಿದ ಒಂದು ಹಂತವಾಗಿದೆ. ಸಂಭವನೀಯ ದಾಳಿಗಳ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಾಗರಿಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ನಾಗರಿಕ ರಕ್ಷಣಾ ತಂತ್ರಗಳಲ್ಲಿ ತರಬೇತಿ ನೀಡಲಾಗುವುದು. ಅಪಘಾತ ತಡೆಗಟ್ಟುವ ವ್ಯವಸ್ಥೆಗಳನ್ನು ಮಾಡಲಾಗುವುದು. ಇದರ ಅಡಿಯಲ್ಲಿ, ಶತ್ರುಗಳ ವೈಮಾನಿಕ ಕಣ್ಗಾವಲು ಅಥವಾ ದಾಳಿಯಿಂದ ನಗರಗಳು ಮತ್ತು ರಚನೆಗಳನ್ನು ಮರೆಮಾಡಲು ತುರ್ತು ಪ್ರೋಟೋಕಾಲ್‌ಗಳನ್ನು ಅಳವಡಿಸಲಾಗುತ್ತದೆ. ನಾಳೆ ಅಂದರೆ ಮೇ 7 ರಂದು ಯುದ್ಧದ ಸೈರನ್ ಮೊಳಗಿಸಲಾಗುತ್ತದೆ ಮತ್ತು ಅಣಕು ಕವಾಯತುಗಳನ್ನು ನಡೆಸಲಾಗುತ್ತದೆ.
ಸುಕ್ಷ್ಮ ಪ್ರದೇಶಗಳಲ್ಲಿ ಶತ್ರುಗಳಿಂದ ವಾಯು ದಾಳಿ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಾಯುದಾಳಿಯ ಸೈರನ್ ಮೊಳಗಿಸಿ ಮಾಹಿತಿ ನೀಡುವುದು.
ಪ್ರತಿಕೂಲ ದಾಳಿ ವೇಳೆ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ತರಬೇತಿ ನೀಡಲಾಗುತ್ತದೆ. ಪ್ರಸ್ತುತ ಇರುವ ಪೀಳಿಗೆ ಯುದ್ಧವನ್ನು ನೋಡಿಲ್ಲ. ಹಾಗಾಗಿ ಮಾಕ್ ಡ್ರಿಲ್ ಅತ್ಯಗತ್ಯವಿದೆ.
ವಾಯುದಾಳಿ ಸಂದರ್ಭದಲ್ಲಿ ನಗರ ಮತ್ತು ಹಳ್ಳಿಗಳಲ್ಲಿ ವಿದ್ಯುತ್ ದೀಪ್ ಸಂಪೂರ್ಣ ಬಂದ್ ಆಗಿರಲಿದೆ. ರಾತ್ರಿ ವಾಹನ ಸಂಚಾರ ಸ್ಥಗಿತವಾಗಿರಲಿದೆ. ವೈರಿಗಳಿಗೆ ಜನಸಂಖ್ಯೆ ವಾಸಿಸುವ ಗುರುತು ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತದೆ.ಒಟ್ಟು 244 ಜಿಲ್ಲೆಗಳಲ್ಲಿ ವಿದ್ಯುತ್ ದೀಪ್ ಬಂದ್ ಆಗಲಿದೆ.