ಶ್ರೀನಗರ: ಜಮ್ಮು- ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಬೆಳ್ಳಂಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಬಲಿಯಾಗಿದ್ದಾರೆ.
ಈ ಎನೌಕೌಂಟರ್‌ನಲ್ಲಿ ಉನ್ನತ ಭಯೋತ್ಪಾದಕ ಕಮಾಂಡರ್ ಸೇರಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳದಲ್ಲಿ ಭಯೋತ್ಪಾದಕರು ಸಿಕ್ಕಿಬಿದ್ದಿದ್ದರು ಎಂದು ಭದ್ರತಾ ಪಡೆಗಳು ತಿಳಿಸಿವೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಆಧಾರಿಸಿ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು.ಆ ವೇಳೆ ಭಯೋತ್ಪಾದಕರು ಪ್ರತಿದಾಳಿ ನಡೆಸಿದರು ಇದು ಗುಂಡಿನ ಚಕಮಕಿಗೆ ಕಾರಣವಾಯಿತು.
ಏ.22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ಶಂಕಿಸಲಾಗಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಪೋಸ್ಟರ್‌ಗಳನ್ನು ಭದ್ರತಾ ಪಡೆಗಳು ಪೋಸ್ಟ್ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.