ಲಖನೌ: ಉತ್ತರ ಪ್ರದೇಶದ ಹಾಪುರ್‌ನ ಥಾನಾ ಕೊಟ್ವಾಲಿ ಪ್ರದೇಶದಲ್ಲಿ ಬುಧವಾರ ತಡರಾತ್ರಿ ನಡೆದ ಎನ್ಕೌಂಟರ್ ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ನವೀನ್ ಕುಮಾರ್ ಬಲಿಯಾಗಿದ್ದಾನೆ.
ಗಾಜಿಯಾಬಾದ್‌ನ ಲೋನಿ ನಿವಾಸಿ ನವೀನ್ ಕುಮಾರ್ ಶಾರ್ಪ್‌ಶೂಟರ್ ಆಗಿದ್ದ,ಹತ್ಯೆ ಮಾಡಿರುವುದಾಗಿ ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಕೊತ್ವಾಲಿಯಲ್ಲಿ ಬಿಷ್ಣೋಯ್ ಗ್ಯಾಂಗ್ ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಬಿಷ್ಣೋಯ್ ಗ್ಯಾಂಗ್ ಪೊಲೀಸರ ಮೇಲೆ ಪ್ರತಿದಾಳಿ ಮಾಡಿದೆ,
ಈ ವೇಳೆ ಗ್ಯಾಂಗ್‌ನ ಶಾರ್ಪ್‌ಶೂಟರ್ ನವೀನ್ ಕುಮಾರ್‌ಗೆ ಗಂಭೀರ ಗಾಯಗಳಾಗಿತ್ತು, ಆತ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ, ನೋಯ್ಡಾ ಘಟಕ ಮತ್ತು ದೆಹಲಿ ಪೊಲೀಸರ ವಿಶೇಷ ಘಟಕದ ಜಂಟಿ ತಂಡಗಳು ಸೇರಿ ಈ ಕಾರ್ಯಾಚರಣೆ ನಡೆಸಿದವು.
ನವೀನ್ ಮೇಲೆ ದೆಹಲಿಯ ಥಾನಾ ಫರ್ಶ್ ಬಜಾರ್‌ನಲ್ಲಿ ಕೊಲೆ, ದರೋಡೆ, ಅಪಹರಣ ಸೇರಿ 20ಕ್ಕೂ ಪ್ರಕರಣ ದಾಖಲಾಗಿದ್ದವು.