ಡೆತ್ ನೋಟ್ ಬರೆದಿಟ್ಟು ವಿಧ್ಯಾರ್ಥಿನಿ ಆತ್ಮ*ತ್ಯೆ

ಕೊಡಗು: ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಮನೆಯವರನ್ನ ನೋಡಿಕೊಳ್ಳಬೇಕಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ಡೆತ್ ನೋಟ್ ಬರೆದಿಟ್ಟು ವಿಧ್ಯಾರ್ಥಿನಿ ಆತ್ಮತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಹಾಸ್ಟೆಲ್ ನಲ್ಲಿ ನಡೆದಿದೆ.

ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಡೆತ್ ನೋಟ್ ಪತ್ತೆಯಾಗಿದೆ.

ಆರು ಸಬ್ಜೆಕ್ಟ್ ಬ್ಯಾಕ್ ಲಾಗ್ ಇರುವ ಕಾರಣ,ಮುಂದೆ ಓದಲು ಇಷ್ಟವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ತೇಜಸ್ವಿನಿ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.

ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿ ತೇಜಸ್ವಿನಿ.ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಳು.ಇದರಲ್ಲಿ ಪಾಲ್ಗೊಳ್ಳದ ಸ್ನೇಹಿತರಿಗೂ ಸಿಹಿ ಹಂಚಿದ್ದಾಳೆ.

ತರಗತಿಗೆ ಆಗಮಿಸಿದ ನಂತರ ನಿನ್ನೆ ಸಂಜೆ 4 ಗಂಟೆಗೆ ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಘಟನೆ ಬೆಳಕಿಗೆ ಬಂದಿದ್ದು,ಪೊನ್ನಂಪೇಟೆ ಪೊಲೀಸರು ‌ಮುಂದಿನ ಕ್ರಮ ಕೈಗೊಂಡಿದ್ದಾರೆ.