ಕಮಲ್ ಗೆ ಚಾಟಿ ಬೀಸಿದ ನ್ಯಾಯಾಲಯ:ಕ್ಷಮೆ ಕೇಳುವಂತೆ ಸೂಚನೆ

ಬೆಂಗಳೂರು: ಕನ್ನಡ ಭಾಷೆ ಬಗ್ಗೆ ಅವಹೇಳನವಾಗಿ ಮಾತನಾಡಿರುವ ನಟ ಕಮಲ್ ಹಸನ್ ಗೆ‌ ಛೀಮಾರಿ ಹಾಕಿರುವ ಕರ್ನಾಟಕ ಹೈಕೋರ್ಟ್,ವಿಚಾರಣೆಯನ್ನು ಒಂದು ವಾರ ಮುಂದೂಡಿದೆ.

ಹಾಗಾಗಿ ಕರ್ನಾಟಕದಲ್ಲಿ ಕಮಲ್ ಹಸನ್ ನಟನೆಯ ಥಗ್‌ ಲೈಫ್‌ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆಯಾದಂತಾಗಿದೆ.

ಕರ್ನಾಟಕದಲ್ಲಿ ಥಗ್‌ಲೈಫ್ ಚಿತ್ರ ರಿಲೀಸ್ ಮಾಡುವ ಕುರಿತು ನಟ ಕಮಲ್ ಹಾಸನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜೂನ್ 10ಕ್ಕೆ ಮುಂದೂಡಿದೆ.

ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ಈ ಕುರಿತು ವಿಚಾರಣೆ ನಡೆಸಿ ಜೂನ್ 10ರ ಒಳಗೆ ಕಮಲ್ ಹಾಸನ್ ಫಿಲಂ ಚೇಂಬರ್ ಜೊತೆಯಲ್ಲಿ ಮಾತುಕತೆ ಮಾಡಿಕೊಂಡು ವಿವಾದ ಇತ್ಯರ್ಥ ಮಾಡಿಕೊಳ್ಳುವಂತೆ ಸೂಚಿಸಿದೆ. ಅಲ್ಲಿಯವರೆಗೂ ಕರ್ನಾಟಕದಲ್ಲಿ ಥಗ್‌ಲೈಫ್ ರಿಲೀಸ್ ಮಾಡದಂತೆ ಸೂಚಿಸಿದೆ.

ವಿಚಾರಣೆ ವೇಳೆ ಹೈಕೋರ್ಟ್​ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕ್ಷಮೆ ಕೇಳಿದ್ರೆ ಮಾತ್ರ ಅರ್ಜಿ ಪರಿಗಣಿಸುತ್ತೇವೆ. ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಅನ್ನೋಕೆ ಅವರೇನು ಇತಿಹಾಸಕಾರರಾ ಎಂದು ಪ್ರಶ್ನುಸಿದ್ದಾರೆ.

ಈ ಹಿಂದೆ ಸಿ.ರಾಜಗೋಪಾಲಾಚಾರಿ ಕೂಡ ಕ್ಷಮೆಯನ್ನು ಕೇಳಿದ್ದರು. ಇವತ್ತಿನ ಪರಿಸ್ಥಿತಿ ನಿರ್ಮಾಣಕ್ಕೆ ನೀವೇ ಕಾರಣ, ಈ ರೀತಿ ಹೇಳಿಕೆ ನೀಡಬಾರದು. ಕಮಲ್ ಹಾಸನ್ ಸಾಮಾನ್ಯ ವ್ಯಕ್ತಿ ಅಲ್ಲ, ಅವರು ಮೊದಲು ಕ್ಷಮೆ ಕೇಳಲಿ, ಆಮೇಲೆ ಅರ್ಜಿ ಪರಿಗಣಿಸುತ್ತೇವೆ ಎಂದು ಹೇಳಿದರು.

ಥಗ್‌ ಲೈಫ್‌ ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾದ ಕಾರಣ ಕಮಲ್‌ ಹಸನ್‌ ಅವರು ಬಿಡುಗಡೆಗೆ ಅವಕಾಶ ನೀಡಬೇಕು ಮತ್ತು ಚಿತ್ರ ಮಂದಿರಕ್ಕೆ ಪೊಲೀಸ್‌ ಭದ್ರತೆ ಒದಗಿಸಬೇಕೆಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.